ಸಂಗ್ರಹ ಚಿತ್ರ 
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ನಿವೃತ್ತಿ ವಯಸ್ಸಿನ ಮಿತಿ ಕುರಿತು ಮಹತ್ವದ ನಿರ್ಣಯ

ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಕಡಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿಲುವು ಪ್ರಕಟಿಸಿದೆ.

ನವದೆಹಲಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಕಡಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿಲುವು ಪ್ರಕಟಿಸಿದೆ.

ಹೌದು.. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸಲು ಮೋದಿ ಸರ್ಕಾರ ಯೋಜಿಸುತ್ತಿದೆ ಎಂಬ ವದಂತಿಗಳನ್ನು ಕೇಂದ್ರ ಸರ್ಕಾರ ಅಲ್ಲಗಳೆದಿದೆ. ಅಲ್ಲದೆ ಅಂತಹ ಯಾವುದೇ ನೀತಿ ನಿರ್ಧಾರಗಳಿಲ್ಲ ಎಂದು ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. 

ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುವಾಗ ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಕುರಿತು ಮೋದಿ ಸರ್ಕಾರದ ನಿಲುವನ್ನು ಪ್ರಕಟಿಸಿದರು.

'ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸಲು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿದೆಯೇ ಅಥವಾ ಕಡ್ಡಾಯ ನಿವೃತ್ತಿಯ 56 (ಜೆ) ಕಲಂ ಅಡಿಯಲ್ಲಿ 50 ವರ್ಷ ದಾಟಿದವರಿಗೆ ಕಡ್ಡಾಯ ನಿವೃತ್ತಿ ಬಗೆಗೆ ಯಾವುದೇ ಪ್ರಸ್ತಾಪವಿದೆಯೇ" ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿತೇಂದ್ರ ಸಿಂಗ್ ಅವರು, 'ನವೆಂಬರ್ 27 ರಂದು ಲೋಕಸಭೆಯಲ್ಲಿ ಉತ್ತರಿಸುತ್ತಾ, "ಪ್ರಸ್ತುತ, ನಿವೃತ್ತಿಯ ವಯಸ್ಸನ್ನು 60 ವರ್ಷದಿಂದ 58 ವರ್ಷಕ್ಕೆ ಇಳಿಸುವ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ