ದೇಶ

ಆಕೆ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಬೇಕಿತ್ತು: ಅತ್ಯಾಚಾರ ಪ್ರಕರಣದ ಬಗ್ಗೆ ತೆಲಂಗಾಣ ಗೃಹ ಸಚಿವ 

ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಗೃಹ ಸಚಿವರು ನೀಡಿರುವ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. 

ತೆಲಂಗಾಣದಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಗೃಹ ಸಚಿವರು ನೀಡಿರುವ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. 

ಅತ್ಯಾಚಾರ ಘಟನೆ ನಡೆಯುವುದಕ್ಕೂ ಮುನ್ನ ಪ್ರಿಯಾಂಕ ರೆಡ್ಡಿ ತಾನು ಇರುವ ಸ್ಥಳದಲ್ಲಿ ವ್ಯಕ್ತಿಗಳು ಅನುಮಾನಾಸ್ಪದರಾಗಿದ್ದಾರೆ ಎಂದು ತನ್ನ ತಂಗಿಗೆ ಕರೆ ಮಾಡಿದ್ದರು. ಇದೇ ಅಂಶದ ಬಗ್ಗೆ ತೆಲಂಗಾಣ ಗೃಹ ಸಚಿವ ಮುಹಮ್ಮದ್ ಮಹಮೂದ್ ಅಲಿ ಮಾತನಾಡಿದ್ದು, ಸಂತ್ರಸ್ತ, ಮೃತ ಯುವತಿ ತನ್ನ ತಂಗಿಗೆ ಕರೆ ಮಾಡುವ ಬದಲು ಪೊಲೀಸರಿಗೆ ಕರೆ ಮಾಡಿದ್ದರೆ ಅಪಾಯದಿಂದ ಪಾರಾಗಬಹುದಿತ್ತು. ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಹತ್ಯೆಯಾಗಿರುವ ಪ್ರಿಯಾಂಕ ರೆಡ್ಡಿ ಸುಶಿಕ್ಷಿತೆಯಾಗಿದ್ದು, ಅಪಾಯದ ಸುಳಿವು ಸಿಕ್ಕ ಬೆನ್ನಲ್ಲೇ 100 ಕ್ಕೆ ಕರೆ ಮಾಡುವ ಬದಲು ಆಕೆ ತನ್ನ ತಂಗಿಗೆ ಕರೆ ಮಾಡಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ.

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಘಟನೆಯ ಬಗ್ಗೆ ತೆಲಂಗಾಣ ಸಚಿವರು ಬೇಜವಾಬ್ದಾರಿ ಹೇಳಿಕೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!