ಸಂಗ್ರಹ ಚಿತ್ರ 
ದೇಶ

ವಿಧಿ 370 ರದ್ದತಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ವಿಚಾರಣೆ ನ.14ಕ್ಕೆ ಮುಂದೂಡಿಕೆ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ ಈ ಸಂಬಂಧ ಸರ್ಕಾರಕ್ಕೆ ನೋಟಿಸ್ ನೀಡಿ ವಿಚಾರಣೆಯನ್ನು ನವೆಂಬರ್ 14ಕ್ಕೆ ಮುಂದೂಡಿದೆ.

ನಿನ್ನೆಯಷ್ಟೇ ಸುಪ್ರೀಂ ಕೋರ್ಟ್ ವಿಧಿ 370 ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ವಿಚಾರಣೆಗಾಗಿ ಸಾಂವಿಧಾನಿಕ ಪೀಠಕ್ಕೆ ರವಾನೆ ಮಾಡಿತ್ತು. ಅದರಂತೆ ಇಂದು ಈ ಅರ್ಜಿಗಳ ವಿಚಾರಣೆ ಆರಂಭಿಸಿದ ಸಾಂವಿಧಾನಿಕ ಪೀಠ  ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡಿದೆ.

ಇಂದು ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿ, ಜಮ್ಮುಕಾಶ್ಮಿರದ ವಿಶೇಷ ಸ್ಥಾನಮಾನ ರದ್ದತಿಯ ಬಗ್ಗೆ ಎದ್ದಿರುವ ಆಕ್ಷೇಪಗಳಿಗೆ ಇನ್ನು ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ನವೆಂಬರ್​ 14ಕ್ಕೆ ಮುಂದೂಡಿದೆ.

ಜಮ್ಮುಕಾಶ್ಮೀರದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಆಗಸ್ಟ್​ 5ರಂದು ರದ್ದುಗೊಳಿಸಿತ್ತು. ಬಳಿಕ ಜಮ್ಮುಕಾಶ್ಮೀರ ಮತ್ತು ಲಡಾಕ್​ಗೆ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ರಾಜ್ಯಸಭಾ ಸದಸ್ಯ ವೈಕೋ ಸೇರಿದಂತೆ ಹಲವರು ಸುಪ್ರೀಂಕೋರ್ಟ್ ​ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT