ಭಾರತ ಬಯಲು ಶೌಚ ಮುಕ್ತ :ಪ್ರಧಾನಿ ಮೋದಿ ಅಧಿಕೃತ ಘೋಷಣೆ 
ದೇಶ

ಭಾರತ ಬಯಲು ಶೌಚ ಮುಕ್ತ: ಪ್ರಧಾನಿ ಮೋದಿ ಅಧಿಕೃತ ಘೋಷಣೆ

ಕೇವಲ ಶೌಚಾಲಯಗಳ ನಿರ್ಮಾಣವಾದರೆ ಸಾಲದು, ಅದರ ನಿಯಮಿತ ಬಳಕೆ ಅಗತ್ಯ ಎಂದು ಪ್ರತಿಪಾದಿಸಿ ಭಾರತವನ್ನು ಬಯಲು ಶೌಚ ಮುಕ್ತ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.

ಅಹಮದಾಬಾದ್: ಕೇವಲ ಶೌಚಾಲಯಗಳ ನಿರ್ಮಾಣವಾದರೆ ಸಾಲದು, ಅದರ ನಿಯಮಿತ ಬಳಕೆ ಅಗತ್ಯ ಎಂದು ಪ್ರತಿಪಾದಿಸಿ ಭಾರತವನ್ನು ಬಯಲು ಶೌಚ ಮುಕ್ತ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಘೋಷಿಸಿದ್ದಾರೆ.

ಗಾಂಧಿ ಜಯಂತಿ ಅಂಗವಾಗಿ ಅಹ್ಮದಾಬಾದ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗ್ರಾಮೀಣ ಭಾರತ ಹಾಗೂ ಅದರ ಗ್ರಾಮಗಳು ತಮ್ಮ ಪ್ರದೇಶಗಳನ್ನು ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿವೆ. 2014 ರಲ್ಲಿ ಈ ಗುರಿಯನ್ನು ನಿಗದಿಪಡಿಸಲಾಗಿತ್ತು. ಇದಕ್ಕೆ ಸ್ವಯಂ ಪ್ರೇರಿತವಾಗಿ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನ ಶಕ್ತಿ ಹಾಗೂ ಯಶಸ್ಸಿನ ಮೂಲ ಎಂದು ಹೇಳಿದ್ದಾರೆ. 

ಬಯಲು ಶೌಚ ಮುಕ್ತ ಭಾರತವಾಗಲು ಪ್ರೇರಣೆ ನೀಡುವ ಸಬರ್ ಮತಿ ಪ್ರದೇಶ ಯಶಸ್ಸಿಗೆ ಸಾಕ್ಷಿಯಾಗಿದೆ  ಎಂದು ಮೋದಿ ಹೇಳಿದ್ದಾರೆ. 2014 ರ ಅ.2 ರಂದು ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನ-ಗ್ರಾಮೀಣ ಯೋಜನೆಯನ್ನು ಉದ್ಘಾಟಿಸಿದ್ದರು. 2019 ರ ಅ.2 ರ ವೇಳೆಗೆ ಗ್ರಾಮೀಣ ಭಾರತವನ್ನು ಬಯಲು ಶೌಚಮುಕ್ತಗೊಳಿಸುವುದು ಈ ಯೋಜನೆಯ ಉದ್ದೇಶವಾಗಿತ್ತು.

ಈ ಯಶಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಅಭಿನಂದನೆ ತಿಳಿಸಿದ್ದು, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿರುವ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. 

ಜನ ಭಾಗಿತ್ವ ಹಾಗೂ ಸ್ವಯಂಸೇವಕ ಮನಸ್ಥಿತಿ ಸ್ವಚ್ಛ ಭಾರತ ಅಭಿಯಾನದ ಯಶಸ್ಸಿಗೆ ಕಾರಣ ಎಂದು ಮೋದಿ ಬಣ್ಣಿಸಿದ್ದಾರೆ. 

ಇದೇ ವೇಳೆ 2022 ರ ವೇಳೆಗೆ ಸಿಂಗಲ್ ಯೂಸ್ ಪ್ಲಾಸ್ಟಿಕ್ ಗೆ ಮುಕ್ತಿ ನೀಡುವುದು ಜಲ್ ಜೀವನ್ ಮಿಷನ್ ಗಳಂತಹ ಸರ್ಕಾರಿ ಯೋಜನೆಗಳು ಯಶಸ್ವಿಯಾಗಲು ಜನಭಾಗಿತ್ವ ಅತ್ಯಂತ ಮುಖ್ಯ ಎಂದು ಮೋದಿ ಹೇಳಿದ್ದು, ಮಹಾತ್ಮಾ ಗಾಂಧಿ ಅವರ ಕನಸುಗಳನ್ನು ನನಸಾಗಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT