ನಾಮಪತ್ರ ಸಲ್ಲಿಸುತ್ತಿರುವ ಆದಿತ್ಯ ಠಾಕ್ರೆ 
ದೇಶ

ಮಹಾ ಚುನಾವಣಾ ಅಖಾಡಕ್ಕಿಳಿದ ಠಾಕ್ರೆ ಕುಡಿ, ಆದಿತ್ಯ ಠಾಕ್ರೆ ಘೋಷಿಸಿಕೊಂಡ ಆಸ್ತಿ ಎಷ್ಟು ಗೊತ್ತಾ?

ಮೊದಲ ಬಾರಿಗೆ ಠಾಕ್ರೆ ಕುಟುಂಬದ ಸದಸ್ಯರೊಬ್ಬರು ಚುನಾವಣಾ ಅಖಾಡಕ್ಕೆ ಇಳಿದಿದ್ದು, ಶಿವಸೇನಾ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರ ಮೊಮ್ಮಗ, ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಅವರು ಗುರುವಾರ

ಮುಂಬೈ: ಮೊದಲ ಬಾರಿಗೆ ಠಾಕ್ರೆ ಕುಟುಂಬದ ಸದಸ್ಯರೊಬ್ಬರು ಚುನಾವಣಾ ಅಖಾಡಕ್ಕೆ ಇಳಿದಿದ್ದು, ಶಿವಸೇನಾ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರ ಮೊಮ್ಮಗ, ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಅವರು ಗುರುವಾರ ವೊರ್ಲಿ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ಶಿವಸೇನಾ ಯುವ ಘಟಕದ ಅಧ್ಯಕ್ಷರಾಗಿರುವ 29 ವರ್ಷದ ಆದಿತ್ಯ ಠಾಕ್ರೆ ಅವರು ಇಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ 16.05 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. 

ಆದಿತ್ಯ ಠಾಕ್ರೆಯ ಸ್ಥಿರಾಸ್ತಿ ಒಟ್ಟು ಮೌಲ್ಯ 11.38 ಕೋಟಿ ರೂಪಾಯಿ ಹಾಗೂ ಚರಾಸ್ಥಿಯ ಒಟ್ಟು ಮೌಲ್ಯ 4.67 ಕೋಟಿ ರೂಪಾಯಿ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.

ಆದಿತ್ಯ 6.5 ಲಕ್ಷ ರೂ. ಮೌಲ್ಯದ ಬಿಎಂಡಬ್ಲ್ಯು ಕಾರನ್ನು ಹೊಂದಿದ್ದು, ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ ಎಂದು ಅಫಿಡವಿಟ್ ನಲ್ಲಿ ಉಲ್ಲೇಖಿಸಲಾಗಿದೆ.

ಶಿವಸೇನಾದ ಪ್ರಾಬಲ್ಯ ಹೊಂದಿರುವ ವೊರ್ಲಿಯಲ್ಲಿ ಆದಿತ್ಯ ಠಾಕ್ರೆ ಕಣಕ್ಕಿಳಿದಿದ್ದು, ಒಂದು ವೇಳೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಮತ್ತೆ ಅಧಿಕಾರಕ್ಕೆ ಬಂದರೆ, ಆದಿತ್ಯ ಠಾಕ್ರೆಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

BRICS 2026: Modi-Putin ಭೇಟಿ; ಆಪ್ತ ಮಿತ್ರನಿಗೆ ಪ್ರಧಾನಿಯಿಂದ ಪವಿತ್ರ, ವಿಶೇಷ ಉಡುಗೊರೆ! Video

ಜಾಗತಿಕ ಭೌಗೋಳಿಕ-ರಾಜಕೀಯ ಅನಿಶ್ಚಿತತೆ: ರಾಜಕೀಯ ಒತ್ತಡ ಹೇರಲು ಆರ್ಥಿಕ ಅಸ್ತ್ರ ಬಳಕೆ, ಬ್ರಿಕ್ಸ್ ಪ್ರತಿಕ್ರಿಯೆ ಏನು? ಇರಾನ್ ಅಧ್ಯಕ್ಷರ ಪ್ರಶ್ನೆ!

ನಿಮ್ಮ ಹೇಳಿಕೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಬಹುದು: ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆಗೆ ರಾಹುಲ್​​ ಗಾಂಧಿ ಆಕ್ಷೇಪ

BRICS 2026: ಭಾರತ ಭಿನ್ನಾಭಿಪ್ರಾಯಗಳನ್ನು ಸರಿಯಾಗಿ ನಿರ್ವಹಿಸಲಿ- ಕ್ಸೀ ಜಿನ್ಪಿಂಗ್ ಭಾರತ ಭೇಟಿಗೂ ಮುನ್ನ ಚೀನಾ