ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಿ.ಚಿದಂಬರಂ

Manjula VN

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಗುರುವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. 

ಚಿದಂಬರಂ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತಂತೆ ಈ ಹಿಂದೆ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ತಿರುಚಲು ಸಾಧ್ಯವಿಲ್ಲದಿರಬಹುದು, ಆದರೆ, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಪ್ರಭಾವಿ ಚಿದಂಬರಂ ಆಗಿದ್ದಾರೆ. ಚಿದಂಬರಂ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿದ್ದು, ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ಹೇಳಿ ಜಾಮೀನು ತಿರಸ್ಕರಿಸಿತ್ತು. 

ಈ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಚಿದಂಬರಂ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಚಿದಂಬರಂ ಪರ ವಕೀಲರಾದ ಕಪಿಲ್ ಸಿಬಲ್ ಅವರು ನ್ಯಾಯಾಲಯದಲ್ಲಿ ತ್ವರಿಗತಿಯಲ್ಲಿ ಅರ್ಜಿ ವಿಚಾರಣೆ ನಡೆಸಲು ವಿಶೇಷ ಅರ್ಜಿಯನ್ನು ಸಲ್ಲಿಸಿದ್ದಾರೆ. 

ಅರ್ಜಿ ಪುರಸ್ಕರಿಸಿರುವ ನ್ಯಾಯಧೀಶ ಎನ್.ವಿ. ರಮಣ ಅವರಿದ್ದ ಪೀಠ, ಮುಖ್ಯ ನ್ಯಾಯಮೂರ್ತಿಗಳು ವಿಚಾರಣೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ಭರವಸೆ ನೀಡಿದ್ದಾರೆ. 

SCROLL FOR NEXT