ಶಾಸಕಿ ಅದಿತಿ ಸಿಂಗ್ ಕಾಂಗ್ರೆಸ್ ಶೋಕಾಸ್ ನೋಟೀಸ್ 
ದೇಶ

ಶಾಸಕಿ ಅದಿತಿ ಸಿಂಗ್ ಕಾಂಗ್ರೆಸ್ ಶೋಕಾಸ್ ನೋಟೀಸ್

 ಉತ್ತರ ಪ್ರದೇಶದ ಪಕ್ಷದ  ಶಾಸಕಿ  ಅದಿತಿ ಸಿಂಗ್ ಅವರಿಗೆ  ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ. 

ಲಕ್ನೋ: ಉತ್ತರ ಪ್ರದೇಶದ ಪಕ್ಷದ  ಶಾಸಕಿ  ಅದಿತಿ ಸಿಂಗ್ ಅವರಿಗೆ  ಕಾಂಗ್ರೆಸ್ ಶೋಕಾಸ್ ನೋಟಿಸ್ ನೀಡಿದೆ. 

ಪಕ್ಷ ಕೈಗೊಂಡ ನಿರ್ಣಯದ ವಿರುದ್ಧ ನಡೆದುಕೊಂಡಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಹಾತ್ಮ ಗಾಂಧಿಯವರ 150ನೇ ಜಯಂತಿ ಅಂಗವಾಗಿ 36 ಗಂಟೆಗಳ ವಿಶೇಷ ರಾಜ್ಯ ವಿಧಾನಸಭಾ ಅಧಿವೇಶನ ಕರೆದಿತ್ತು. ಆದರೆ,  ವಿಶೇಷ ಅಧಿವೇಶನವನ್ನು  ಪ್ರತಿಪಕ್ಷಗಳಾದ ಸಮಾಜವಾದಿ ಪಕ್ಷ,  ಬಿಎಸ್‌ಪಿ ಮತ್ತು ಕಾಂಗ್ರೆಸ್ ಬಹಿಷ್ಕರಿಸಿದ್ದವು. ಆದರೆ ಅದಿತಿ ಸಿಂಗ್ ಅವರು ಮಾತ್ರ ಬುಧವಾರ ವಿಧಾನಸಭಾ ಕಲಾಪದಲ್ಲಿ ಭಾಗವಹಿಸಿದ್ದರು.

ಹಾಗಾಗಿ ಕಾಂಗ್ರೆಸ್ ಆಕೆಗೆ ಶೋ-ಕಾಸ್ ನೋಟಿಸ್ ನೀಡಿ, ಎರಡು ದಿನಗಳಲ್ಲಿ ವಿವರಣೆ ನೀಡುವಂತೆ ತಾಕೀತು ಮಾಡಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ  ನಾಯಕ ಅಜಯ್ ಕುಮಾರ್ ಲಲ್ಲೂ, ಪಕ್ಷದ ವಿಪ್  ಧಿಕ್ಕರಿಸಿ ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಶಾಸಕಿ ಅದಿತಿ ಸಿಂಗ್ ಅವರಿಗೆ  ನೋಟಿಸ್ ನೀಡಿ ಎರಡು ದಿನಗಳಲ್ಲಿ ಸ್ಪಷ್ಟನೆ ನೀಡುವಂತೆ ಕೋರಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!