ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮಹಾ ಚುನಾವಣೆ: ಕೊನೆಗೂ ಬಿಜೆಪಿ - ಶಿವಸೇನೆ ಸೀಟು ಹಂಚಿಕೆ ಅಂತಿಮ, ತಲಾ 164-124 ಕ್ಷೇತ್ರಗಳಲ್ಲಿ ಸ್ಪರ್ಧೆ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಆಡಳಿತರೂಢ ಬಿಜೆಪಿ ಮತ್ತು ಶಿವಸೇನೆ ನಡುವೆ ಕೊನೆಗೂ ಸೀಟು ಹಂಚಿಕೆ ಅಂತಿಮವಾಗಿದ್ದು, ತಲಾ 164 ಹಾಗೂ 124 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ.

ದೇವೇಂದ್ರ ಫಡ್ನವೀಸ್ ಮತ್ತು ಉದ್ಧವ್ ಠಾಕ್ರೆ
Lingaraj Badiger
Updated On : 4 Oct 2019, 9:01 pm

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಆಡಳಿತರೂಢ ಬಿಜೆಪಿ ಮತ್ತು ಶಿವಸೇನೆ ನಡುವೆ ಕೊನೆಗೂ ಸೀಟು ಹಂಚಿಕೆ ಅಂತಿಮವಾಗಿದ್ದು, ತಲಾ 164 ಹಾಗೂ 124 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ.

ಮೈತ್ರಿಗಳ ಪಕ್ಷಗಳ ಸೀಟು ಹಂಚಿಕೆಯನ್ನು ಘೋಷಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ಬಿಜೆಪಿ 150 ಕ್ಷೇತ್ರಗಳಲ್ಲಿ ಹಾಗೂ ಶಿವಸೇನೆ 124 ಕ್ಷೇತ್ರಗಳಲ್ಲಿ ಮತ್ತು ಇತರೆ ಮಿತ್ರ ಪಕ್ಷಗಳು 14 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿವೆ ಎಂದರು.

ಇತರೆ ಪಕ್ಷಗಳಾದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ, ರಾಷ್ಟ್ರೀಯ ಸಮಾಜ ಪಕ್ಷ, ಶಿವ ಸಂಗ್ರಾಮ ಪಕ್ಷ ಹಾಗೂ ರೈತ ಕ್ರಾಂತಿ ಸಂಘಟನೆಗಳು ಸಹ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಬಹುತೇಕ ಪಕ್ಷಗಳ ಬಿಜೆಪಿಯ ಕಮಲ ಚಿಹ್ನೆ ಅಡಿ ಸ್ಪರ್ಧಿಸಲಿವೆ.

Advertisement

Advertisement

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಶಿವಸೇನೆ ಮೈತ್ರಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಫಡ್ನವಿಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮತ್ತು ಶೀವಸೇನೆ ಹಿಂದೂತ್ವ ತತ್ವದಡಿ ಒಂದಾಗಿದ್ದು, ಇದಕ್ಕೆ ರಾಜ್ಯಾದ್ಯಂತ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ ಮತ್ತೆ ಸ್ಪಷ್ಟ ಬಹುಮತದೊಂದಿಗೆ ನಾವು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ ಎಂದು ಮಹಾ ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement