ಚುನಾವಣಾ ಕಣಕ್ಕೆ 'ಟಿಕ್ ಟಾಕ್ ಸ್ಟಾರ್' ಸೊನಾಲಿ ಪೊಗಾಟ್ !
ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಾಟ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹರಿಯಾಣ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.
ಚಂಡೀಘಡ: ಟಿಕ್ ಟಾಕ್ ಸ್ಟಾರ್ ಸೊನಾಲಿ ಪೊಗಾಟ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹರಿಯಾಣ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ.
ಅಡಂಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸೊನಾಲಿ ಪೊಗಾಟ್ ಅವರಿಗೆ ಟಿಕೆಟ್ ನೀಡಲಾಗಿದೆ. ಎಲ್ಲಾ ಅಭಿಮಾನಿಗಳು ತಮ್ಮಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕಾಯುತ್ತಿದ್ದಾರೆ ಎಂದು ಸೊನಾಲಿ ಪೊಗಾಟ್ ತಿಳಿಸಿದ್ದಾರೆ.
ಸದೃಢ ಕಾರ್ಯಕ್ಕಾಗಿ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದಾಗಿ ಸೊನಾಲಿ ಪೊಗಾಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.