ಸೋನಿಯಾ ಗಾಂಧಿ 
ದೇಶ

ಮಹಾ ಚುನಾವಣೆ: ಮತ್ತೆ ಸ್ಟಾರ್ ಪ್ರಚಾರಕಿಯಾಗಿ ಮರಳಿದ ಸೋನಿಯಾ ಗಾಂಧಿ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಶನಿವಾರ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತೆ ಸ್ಟಾರ್ ಪ್ರಚಾರಕರಾಗಿ ಮರಳಿದ್ದಾರೆ.

ನವದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಶನಿವಾರ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮತ್ತೆ ಸ್ಟಾರ್ ಪ್ರಚಾರಕರಾಗಿ ಮರಳಿದ್ದಾರೆ.

ಅಕ್ಟೋಬರ್ 21ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರಚಾರದಿಂದ ದೂರು ಉಳಿದಿದ್ದ ಸೋನಿಯಾ ಗಾಂಧಿ ಅವರು ಮತ್ತೆ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದು, ಈಗ ಚುನಾವಣಾ ಪ್ರಚಾರಕ್ಕೆ ಮರಳಿದ್ದಾರೆ.

2014ರ ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 288 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ 42 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಇನ್ನು ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!