ದೇಶ

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ: ಪ್ರಧಾನಿ ಮೋದಿ, ಶಾ ಪ್ರಚಾರ

Nagaraja AB

ಮುಂಬೈ:  ಇದೇ ತಿಂಗಳ 21 ರಂದು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆಯಲಿದ್ದು,  ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು  ಬಿಜೆಪಿ ನೇತೃತ್ವದ ಮಹಾಯುತಿ  ಮೈತ್ರಿಕೂಟ ರಣತಂತ್ರ ರೂಪಿಸುತ್ತಿದೆ. 

ಪ್ರಚಾರದ ಕಣ ರಂಗೇರಿದ್ದು, ಮುಂಬರುವ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ 9 ಹಾಗೂ ಕೇಂದ್ರ ಗೃಹ ಸಚಿವ ಅಮಿತ್ 18 ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 

ಅಕ್ಟೋಬರ್ 17 ರಂದು ಪುಣೆ ಹಾಗೂ ಸಾತಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ  ಎಂದು ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ  ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ. 

ಎನ್ ಡಿಎ ಮೈತ್ರಿಕೂಟ ಕಾಂಗ್ರೆಸ್- ಎಸ್ ಸಿಪಿ ನೇತೃತ್ವದ ಮೈತ್ರಿಕೂಟವನ್ನು ಚುನಾವಣೆಯಲ್ಲಿ ಸೋಲಿಸಿ ಮತ್ತೆ ಅಧಿಕಾರದ ಗದ್ದುಗೆ ಏರುವ ನಿಟ್ಟಿನಲ್ಲಿ ತೀವ್ರ ಕಸರತ್ತು ನಡೆಸುತ್ತಿದೆ. 

SCROLL FOR NEXT