ದೇಶ

ಜಮ್ಮು-ಕಾಶ್ಮೀರ: ಅವಂತಿಪೋರಾದಲ್ಲಿ ಎನ್'ಕೌಂಟರ್, ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನೆ

Manjula VN

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಎನ್'ಕೌಂಟರ್ ನಡೆಸಿರುವ ಭಾರತೀಯ ಸೇನೆ, ಓರ್ವ ಉಗ್ರನನ್ನು ಮಂಗಳವಾರ ಹೊಡೆದುರುಳಿಸಿದೆ. 

ಅವಂತಿಪೋರಾದ ಹೊರವಲಯದಲ್ಲಿ ಉಗ್ರ ಅಡಗಿಕುಳಿತಿರುವ ಖಚಿತ ಮಾಹಿತಿ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. 

ಕೂಡಲೇ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನೆ, ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಘಳು ಮಾಹಿತಿ ನೀಡಿದ್ದಾರೆ. 

ಹತ್ಯೆಯಾದ ಉಗ್ರನ ಕುರಿತು ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. 

SCROLL FOR NEXT