ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.5ರಷ್ಟು ಹೆಚ್ಚಳ

Lingaraj Badiger

ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ದೀಪಾವಳಿ ಹಬ್ಬದ ಗಿಫ್ಟ್ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ. 5ರಷ್ಟು ಹೆಚ್ಚಿಸಲು ಬುಧವಾರ ನಡೆದ ಕೇಂದ್ರ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಶಾಸ್ತ್ರಿ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಕೇಂದ್ರ ಸರ್ಕಾರಿ ನೌಕರರ ಡಿಎ ಶೇ.5 ರಷ್ಟು ಹೆಚ್ಚಿಸಲು ಸಂಪುಟ ತೀರ್ಮಾನಿಸಿದೆ ಎಂದರು.

ಸದ್ಯ ಶೇ.12 ರಷ್ಟು ಇರುವ ತುಟ್ಟಿಭತ್ಯೆಯನ್ನು ಈಗ ಶೇ.17ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಸರ್ಕಾರಕ್ಕೆ 16 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಜಾವೇಡಕರ್ ಅವರು ತಿಳಿಸಿದ್ದಾರೆ.

ಜುಲೈ 1ರಿಂದ ಪೂರ್ವಾನ್ವಯವಾಗಿ ಇದು ಜಾರಿಯಾಗಲಿದ್ದು, ಇದರಿಂದ 50 ಲಕ್ಷ ನೌಕರರು ಮತ್ತು 65 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ.

SCROLL FOR NEXT