ಸಂಗ್ರಹ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ, ಈ ಬಗ್ಗೆ ಚೀನಾಗೂ ಅರಿವಿದೆ: ವಿದೇಶಾಂಗ ಇಲಾಖೆ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತ ಪ್ರವಾಸಕ್ಕೂ ಮುನ್ನವೇ ಕೇಂದ್ರ ವಿದೇಶಾಂಗ ಇಲಾಖೆ ಚೀನಾ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಪುನರುಚ್ಛರಿಸಿದೆ.

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತ ಪ್ರವಾಸಕ್ಕೂ ಮುನ್ನವೇ ಕೇಂದ್ರ ವಿದೇಶಾಂಗ ಇಲಾಖೆ ಚೀನಾ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದು, ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಪುನರುಚ್ಛರಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಕಾಶ್ಮೀರ ವಿಚಾರ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಈ ಕುರಿತಂತೆ ಭಾರತದ ವಿರುದ್ಧ ವಾಗ್ದಾಳಿ ನಡೆಸಿರುವ ಪಾಕಿಸ್ತಾನಕ್ಕೆ ಚೀನಾ ಬೆಂಬಲ ನೀಡುತ್ತಿದೆ. ಏತನ್ಮಧ್ಯೆ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಇದೇ ಅಕ್ಟೋಬರ್ 11ರಂದು ಭಾರತಕ್ಕೆ ಆಗಮಿಸಲಿದ್ದು, ಮತ್ತೆ ಕಾಶ್ಮೀರ ವಿಚಾರ ಚರ್ಚೆ ಮಾಡುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಭಾರತ ಸರ್ಕಾರ ಇದೀಗ ಕಾಶ್ಮೀರ ವಿಚಾರವಾಗಿ ಚೀನಾಗೆ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಈ ಬಗ್ಗೆ ಚೀನಾಗೆ ಅರಿವಿದೆ ಎಂದು ಹೇಳುವ ಮೂಲಕ ಕಾಶ್ಮೀರ ಕುರಿತ ಚರ್ಚೆ ಬೇಡ ಎಂಬ ಪರೋಕ್ಷ ಸಂದೇಶ ಸಾರಿದೆ.

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕೇಂದ್ರ ವಿದೇಶಾಂಗ ಇಲಾಖೆ ವಕ್ತಾರ ರಾವೀಶ್ ಕುಮಾರ್ ಅವರು, ಕಾಶ್ಮೀರ ವಿಚಾರವಾಗಿ ಭಾರತ ಎಂದೂ ತನ್ನ ನಿಲುವು ಬದಲಿಸಿಲ್ಲ. ಬದಲಿಸುವುದೂ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಇತರೆ ದೇಶಗಳು ಮಧ್ಯ ಪ್ರವೇಶ ಮಾಡುವ ಅಗತ್ಯವಿಲ್ಲ. ಈ ಬಗ್ಗೆ ಚೀನಾಗೂ ಅರಿವಿದೆ ಎಂದು ಹೇಳುವ ಮೂಲಕ ಚೀನಾ ಕಾಶ್ಮೀರ ವಿಚಾರ ಮಾತನಾಡದಂತೆ ಪರೋಕ್ಷ ಸೂಚನೆ ನೀಡಿದ್ದಾರೆ. 

ಅಂತೆಯೇ ಕಾಶ್ಮೀರ ವಿಚಾರವಾಗಿ ಕ್ಸಿ ಜಿನ್ ಪಿಂಗ್ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಚರ್ಚೆ ನಡೆಸಿದ್ದರೂ, ಆ ಚರ್ಚೆಗೂ ಇದು ಅನ್ವಯವಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ