ಐಎಂಎ ಹಗರಣ; ಸಕ್ಷಮ ಪ್ರಾಧಿಕಾರಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಐಎಂಎ (ಮಾನಿಟರಿ ಅಡ್ವೈಸರಿ) ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ-2004 (ಕೆಪಿಐಡಿ) ಅನುಸಾರ ಸಕ್ಷಮ ಪ್ರಾಧಿಕಾರ ನೇಮಕ ಮಾಡಿದ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಬೆಂಗಳೂರು: ಐಎಂಎ (ಮಾನಿಟರಿ ಅಡ್ವೈಸರಿ) ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ-2004 (ಕೆಪಿಐಡಿ) ಅನುಸಾರ ಸಕ್ಷಮ ಪ್ರಾಧಿಕಾರ ನೇಮಕ ಮಾಡಿದ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸರ್ಕಾರಿ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಐಎಂಎ ಕಂಪನಿ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ ಖಾನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ತಡೆಯಾಜ್ಞೆ ನೀಡಲು ನಿರಾಕರಿಸಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.