ದೇಶ

ಕಾಶ್ಮೀರ: ಎಲ್ಒಸಿ ಬಳಿ ಗಡಿ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ 500 ಉಗ್ರರು

Lingaraj Badiger

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಬಳಿಕ ಭಾರತದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವ ಪಾಕಿಸ್ತಾನದ ಉಗ್ರರು ಗಡಿ ನುಸುಳಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಸೇನಾ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಅಡುಗುದಾಣಗಳಲ್ಲಿ ಸುಮಾರು 500 ಉಗ್ರರು ಗಡಿ ನುಸುಳಲು ಸನ್ನದ್ದ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಅವರು ಹೇಳಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಸುಮಾರು 200 ರಿಂದ 300 ಉಗ್ರರು ಪಾಕಿಸ್ತಾನದ ಬೆಂಬಲದೊಂದಿಗೆ ಭಾರತಕ್ಕೆ ಒಳನುಸಳಲು ಸಂಚು ರೂಪಿಸಿದ್ದಾರೆ ಎಂದು ಉತ್ತರ ಕಮಾಂಡ್ ಚೀಫ್ ಲೆಫ್ಟಿನೆಂಟ್ ಜನರಲ್ ರಣ್ ಬೀರ್ ಸಿಂಗ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.

ಉಗ್ರರು ಎಷ್ಟೇ ಸಂಖ್ಯೆಯಲ್ಲಿದ್ದರೂ ಅವರ ಗಡಿ ನುಸುಳುವ ಯತ್ನ ವಿಫಲಗೊಳಿಸುವ ಸಾಮರ್ಥ್ಯ ಭಾರತೀಯ ಸೇನೆಗೆ ಇದೆ. ಉಗ್ರರನ್ನು ಹೊಡೆದುರುಳಿಸಿ ಕಣಿವೆಯಲ್ಲಿ ಶಾಂತಿ ಕಾಪಾಡಲಾಗುವುದು ಎಂದು ಅವರು ಹೇಳಿದ್ದಾರೆ.

SCROLL FOR NEXT