ದೇಶ

2019ರಲ್ಲಿ ಕದನ ವಿರಾಮ ಉಲ್ಲಂಘನೆ ದುಪ್ಪಟ್ಟು, 147 ಉಗ್ರರ ಹತ್ಯೆ!

Srinivasamurthy VN

ನವದೆಹಲಿ: 2018ನೇ ಸಾಲಿಗೆ ಹೋಲಿಕೆ ಮಾಡಿದರೆ 2019ರಲ್ಲಿ ಇಂಡೋ-ಪಾಕ್ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದ್ದು, ಅಕ್ಟೋಬರ್ 10ರವರೆಗೆ 147 ಉಗ್ರರರನ್ನು ಹತ್ಯೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ.

ಕದನವಿರಾಮ ಉಲ್ಲಂಘನೆ ಕುರಿತಂತೆ ಭಾರತೀಯ ಸೇನೆ ವರದಿ ಬಿಡುಗಡೆ ಮಾಡಿದ್ದು, ವರದಿಯಲ್ಲಿ 2018ಕ್ಕಿಂತ 2019ರಲ್ಲಿ ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಸಂಖ್ಯೆ ದುಪ್ಪಟ್ಟಾಗಿದೆ. ಆದರೆ ಈ ವರ್ಷದಲ್ಲಿ ಪ್ರಮುಖವಾಗಿ ಭಾರತ ಸರ್ಕಾರ ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370 ರದ್ಧು ಮಾಡಿದ ಬಳಿಕ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ಹೆಚ್ಚಾಗಿದೆ. 2019ರ ಅಕ್ಟೋಬರ್ 10ರವರೆಗೂ 2317 ಬಾರಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಲ್ಲದೆ ವಿವಿಧ ಕಾರ್ಯಾಚರಣೆಗಳಲ್ಲಿ ಕಣಿವೆ ರಾಜ್ಯದಲ್ಲಿ ಒಟ್ಟು 147 ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ವರದಿಯಲ್ಲಿರುವಂತೆ 2018ರಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಸಂಖ್ಯೆ 1629ರಷ್ಟಿತ್ತು. ಅಲ್ಲದೆ ಕಳೆದ ವರ್ಷ ಕಣಿವೆ ರಾಜ್ಯದ ಇಂಡೋ-ಪಾಕ್ ಗಡಿ ಭಾಗದಲ್ಲಿ ನಡೆದ ವಿವಿಧ ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ ಅತೀ ಹೆಚ್ಚು ಅಂದರೆ 254 ಉಗ್ರರರನ್ನು ಸೇನೆ ಹೊಡೆದುರುಳಿಸಿತ್ತು. 

SCROLL FOR NEXT