ಮಹಾ ಚುನಾವಣೆ: ಶಿವಸೇನೆಯ ಈ ಅಭ್ಯರ್ಥಿ ಒಂದೊಂದು ಏರಿಯಾದಲ್ಲಿ ಒಂದೊಂದು ಹೆಸರಿನಿಂದ ಪ್ರಚಾರ! 
ದೇಶ

ಮಹಾ ಚುನಾವಣೆ: ಶಿವಸೇನೆಯ ಈ ಅಭ್ಯರ್ಥಿ ಒಂದೊಂದು ಏರಿಯಾದಲ್ಲಿ ಒಂದೊಂದು ಹೆಸರಿನಿಂದ ಪ್ರಚಾರ! 

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಶಿವಸೇನೆಯ ಮುಂಬ್ರಾ-ಕಲ್ವಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎರಡು ಪ್ರತ್ಯೇಕ ಏರಿಯಾಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. 

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಶಿವಸೇನೆಯ ಮುಂಬ್ರಾ-ಕಲ್ವಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎರಡು ಪ್ರತ್ಯೇಕ ಏರಿಯಾಗಳಲ್ಲಿ ಬೇರೆ ಬೇರೆ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. 

ಈ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ದೀಪಾಲಿ ಭೋಸ್ಲೆ ಸೋಫಿಯಾ ಸಯೀದ್ ಎಂಬ ಹೆಸರಿನಿಂದಲೂ ಹೆಚ್ಚು ಪರಿಚಿತರು. ದೀಪಾಲಿ ಮರಾಠಿ ನಟಿಯಾಗಿದ್ದು, ವಿವಾಹದ ನಂತರ ಆಕೆಯ ಹೆಸರನ್ನು ಸೋಫಿಯಾ ಸಯೀದ್ ಎಂದು ಬದಲಾವಣೆ ಮಾಡಿಕೊಂಡಿದ್ದಾರೆ. 

ಹಿಂದೂಗಳ ಜನಸಂಖ್ಯೆ ಇರುವ ಪ್ರದೇಶದಲ್ಲಿ ಶಿವಸೇನೆಯ ಅಭ್ಯರ್ಥಿ ದೀಪಾಲಿ ಎಂಬ ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಮುಸ್ಲಿಮರು ಹೆಚ್ಚಿರುವ ಪ್ರದೇಶದಲ್ಲಿ ಸೋಫಿಯಾ ಎಂಬ ಹೆಸರಿನಲ್ಲಿ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. 

ನಾಮಪತ್ರದಲ್ಲಿ ದಾಖಲಾಗಿರುವ ಅಧಿಕೃತ ಹೆಸರು ದೀಪಾಲಿ ಸಯೀದ್, ಪ್ರಚಾರ ಪೋಸ್ಟರ್ ಗಳಲ್ಲಿ ದೀಪಾಲಿ ಭೋಸ್ಲೆ ಸಯೀದ್ ಎಂಬ ಹೆಸರು ಕಾಣಸಿಗುತ್ತವೆ. ಅ.21 ರಂದು ವಿಧಾನಸಭೆಗೆ ಮತದಾನ ನಡೆಯಲಿದ್ದು ಅ.24 ರಂದು ಮತ ಎಣಿಕೆ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ