ಸಂಗ್ರಹ ಚಿತ್ರ 
ದೇಶ

ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಕಿಡಿಕಾರಿದ್ದಾರೆ.

ಪಕ್ಷದ ಸಭೆಯೊಂದರಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಜಗನ್ ಮಾನಸಿಕ ಅಸ್ವಸ್ಥರಾಗಿದ್ದಾರೆ. ರಾಜ್ಯ ಸರ್ಕಾರವು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ವೈಎಸ್ಆರ್ಸಿಪಿ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಇತರ ಪಕ್ಷಗಳ ಮುಖಂಡರ ಮೇಲೆ ಅನಗತ್ಯ ಮತ್ತು ಕಾನೂನು ಬಾಹಿರ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಪೊಲೀಸರು ಅನಗತ್ಯ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ. ನಾನು ಒಳ್ಳೆಯವರಿಗೆ ಒಳ್ಳೆಯವನು. ಆದರೆ ಜಗನ್ ಸೈಕೋನಂತೆ ವರ್ತಿಸುತ್ತಿದ್ದಾರೆ ಎಂದು ನಾಯ್ಡು ಪರೋಕ್ಷ ಆಕ್ರೋಶ ವ್ಯಕ್ತಪಡಿಸಿದರು.

"ವೈಎಸ್ಆರ್ಸಿಪಿ ಪಕ್ಷದ ನಾಯಕರು ರಾಜ್ಯದಲ್ಲಿ 'ಜೆ ಟ್ಯಾಕ್ಸ್' (ಜಗನ್ ತೆರಿಗೆ) ವಸೂಲಿ ಮಾಡುತ್ತಿದ್ದಾರೆ. ನಾನು ಅನೇಕ ಮುಖ್ಯಮಂತ್ರಿಗಳನ್ನು ನೋಡಿದ್ದೇನೆ. ಆದರೆ ಇವರಂತಹ ಸೈಕೋ ಮುಖ್ಯಮಂತ್ರಿಯನ್ನು ನಾನು ನೋಡಿಲ್ಲ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು. ಸರ್ಕಾರ ತನ್ನ ಸೊಕ್ಕಿನ ಮನೋಭಾವವನ್ನು ಬದಲಾಯಿಸಿಕೊಳ್ಳಬೇಕೆಂದು ನಾನು ಎಚ್ಚರಿಸುತ್ತೇನೆ. ಈ ಸರ್ಕಾರ ನಮ್ಮ ಪಕ್ಷದ ಮುಖಂಡರನ್ನು ಗುರಿಯಾಗಿಸಿಕೊಂಡಿದೆ. ಅದು ನ್ಯಾಯ ಸಮ್ಮತವಲ್ಲ 'ಎಂದು ನಾಯ್ಡು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT