ಅಮರ್ಥ್ಯ ಸೇನ್ 
ದೇಶ

ಅಭಿಜಿತ್‌ ಬ್ಯಾನರ್ಜಿ ಗೆ ನೊಬೆಲ್ :'ಅಮರ್ಥ್ಯ ಸೇನ್ ಅತೀವ ಸಂತಸ!

ಭಾರತೀಯ ಮೂಲದ ಅಭಿಜಿತ್‌ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಿರುವುದಕ್ಕೆ ಹಿರಿಯ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ಥ್ಯಸೇನ್ ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಭಾರತೀಯ ಮೂಲದ ಅಭಿಜಿತ್‌ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ಲಭಿಸಿರುವುದಕ್ಕೆ ಹಿರಿಯ ಅರ್ಥಶಾಸ್ತ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ಥ್ಯಸೇನ್ ಅತೀವ ಸಂತೋಷ ವ್ಯಕ್ತಪಡಿಸಿದ್ದಾರೆ.

ಅರ್ಥಶಾಸ್ತ್ರದಲ್ಲಿ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅವರಿಗೆ ನೊಬೆಲ್ ಪ್ರಶಸ್ತಿ ಸಿಕ್ಕಿರುವುದಕ್ಕೆ ತುಂಬಾ ತುಂಬಾ ಸಂತೋಷವಾಗುತ್ತಿದೆ ಎಂದು ಅಮರ್ಥ್ಯಸೇನ್ ಪ್ರತಿಕ್ರಿಯಿಸಿದ್ದಾರೆ. 1998ರಲ್ಲಿ ಆರ್ಥಿಕ ಕಲ್ಯಾಣ ಕೊಡುಗೆಗಾಗಿ ಅಮರ್ಥ್ಯ ಸೇನ್ ಕೂಡಾ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದರು.

ಬೊಸ್ಟಾನ್ ನಿಂದ ಪಿಐಟಿ ಸುದ್ದಿಸಂಸ್ಥೆ ಜೊತೆಗೆ ಮಾತಾಡಿರುವ ಅಮರ್ಥ್ಯ ಸೇನ್,  ತುಂಬಾ ಸಮರ್ಥರಾದ ವ್ಯಕ್ತಿಗಳಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ ಎಂದು ಭಾವಿಸುವುದಾಗಿ ಅವರು ಹೇಳಿದ್ದಾರೆ.

58 ವರ್ಷದ ಬ್ಯಾನರ್ಜಿ  ಅವರ ಪತ್ನಿ,  ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮರ್ ಅವರುಗಳು 2019ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬ್ಯಾನರ್ಜಿ ಪ್ರಸ್ತುತ ಮ್ಯಾಸಚೂಸೆಟ್ ನ ತಂತ್ರಜ್ಞಾನ ಸಂಸ್ಥೆಯಲ್ಲಿ ಅರ್ಥಶಾಸ್ತ್ರ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬ್ಯಾನರ್ಜಿ 1988 ರಲ್ಲಿ ಪಿಹೆಚ್ ಡಿ ಪಡೆದ ಹಾರ್ವಡ್ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿ ಅಮರ್ಥ್ಯ ಸೇನ್ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT