ಮಂದಿರ ನಿರ್ಮಾಣ; ಸಂಚಲನ ಸೃಷ್ಟಿಸಿದ ಬಿಜೆಪಿ ನಾಯಕ ಸಾಕ್ಷಿ ಮಹಾರಾಜ್ ಹೇಳಿಕೆ 
ದೇಶ

ಮಂದಿರ ನಿರ್ಮಾಣ; ಸಂಚಲನ ಸೃಷ್ಟಿಸಿದ ಬಿಜೆಪಿ ನಾಯಕ ಸಾಕ್ಷಿ ಮಹಾರಾಜ್ ಹೇಳಿಕೆ

ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಗ್ಗೆ ಬಿಜೆಪಿ ಸಂಸದ ಸಾಕ್ಷಿಮಹಾರಾಜ್ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.

ನವದೆಹಲಿ: ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬಗ್ಗೆ ಬಿಜೆಪಿ ಸಂಸದ ಸಾಕ್ಷಿಮಹಾರಾಜ್ ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಸಾಕ್ಷಿ ಮಹಾರಾಜ್, ಆಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಕೆಡವಿದ ದಿನವಾದ ಡಿಸೆಂಬರ್  6 ರಂದು ರಾಮಮಂದಿರ ನಿರ್ಮಾಣ ಆರಂಭಿಸುವುದಾಗಿ ಅಂದೇ  ಪ್ರಕಟಿಸಿದ್ದೆವು ಎಂದು ತಿಳಿಸಿದ್ದಾರೆ.

1992ರ ಡಿಸೆಂಬರ್ 6 ರಂದು ಬಾಬ್ರಿ ಮಸೀದಿಯನ್ನು ಕೆಡವಲಾಯಿತು. ಬರುವ ಡಿಸೆಂಬರ್ 6 ರಿಂದ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಲಿದೆ ಎಂದು ಅವರು ಘೋಷಿಸಿದ್ದಾರೆ. ತಮ್ಮ ಹೇಳಿಕೆ ತಾರ್ಕಿಕವಾಗಿರಬಹುದು. ಆದರೆ, ಮಸೀದಿಯನ್ನು ಎಂದು  ದ್ವಂಸಗೊಳಿಸಿದೆವೊ, ಮಂದಿರ ನಿರ್ಮಾಣವನ್ನು ಅದೇ ದಿನ ಆರಂಭಿಸಲಿದ್ದೇವೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
 
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತಿಯಲ್ಲಿ ಇದು ಸಾಕಾರವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದ್ದಾರೆ.  ಬಾಬರ್ ಆಕ್ರಮಣಕಾರ. "ಆತ ನಮ್ಮ ಪೂರ್ವಿಕನಲ್ಲ ಎಂದು ಸುನ್ನಿ ವಕ್ಫ್ ಮಂಡಳಿ ಒಪ್ಪಿಕೊಂಡಿದೆ ಎಂದು ತಮ್ಮ ಲೋಕಸಭಾ ಕ್ಷೇತ್ರದ ಉನ್ನಾವೋದಲ್ಲಿ ಸಾಕ್ಷಿ ಮಹಾರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತೊಂದೆಡೆ, ಸುಪ್ರೀಂ ಕೋರ್ಟ್ ಆಯೋಧ್ಯೆ ಪ್ರಕರಣ ಸಂಬಂಧ ಮಹತ್ವ ಹೇಳಿಕೆ ನೀಡಿದ್ದು, ಆಗಿದ್ದು.. ಆಯ್ತು ಆಯೋಧ್ಯೆ ವಿಚಾರಣೆ ಇಂದು ಪೂರ್ಣಗೊಳಿಸಲಾಗುವುದು.  ಈ ಹಂತದಲ್ಲಿ ವಿವಾದ ಕುರಿತು ಯಾವುದೇ ಹೊಸ ಆರ್ಜಿ ವಿಚಾರಣೆಗೆ ಸ್ವೀಕರಿಸುವುದಿಲ್ಲ ಎಂದು  ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT