ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಅವರೊಂದಿಗೆ ಗುರ್ಮೀತ್ ಸಿಂಗ್ ಅಲಿಯಾಸ್ ಷಿರಾ 
ದೇಶ

ಸಲ್ಮಾನ್‌ ಖಾನ್ ಆಪ್ತ ಸಹವರ್ತಿ ಶಿವಸೇನೆ ಪಕ್ಷಕ್ಕೆ ಸೇರ್ಪಡೆ 

ಮುಂದಿನ ಎರಡು ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಆಸಕ್ತಿದಾಯಕ ಬೆಳವಣಿಗೆಗಳು ಘಟಿಸುತ್ತಿವೆ.

ಮುಂಬೈ: ಮುಂದಿನ ಎರಡು ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಆಸಕ್ತಿದಾಯಕ ಬೆಳವಣಿಗೆಗಳು ಘಟಿಸುತ್ತಿವೆ. ಶನಿವಾರ ಸಂಜೆ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಳ್ಳಲಿದ್ದು, ಇದರಿಂದಾಗಿ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಕೊನೆಗಳಿಗೆ ಆಸ್ತ್ರಗಳನ್ನು ಪ್ರಯೋಗಿಸಲು ಮುಂದಾಗಿವೆ.


 ಈ ನಿಟ್ಟಿನಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೆ ದೀರ್ಘಕಾಲ ಕಾರ್ಯನಿರ್ವಹಿಸಿದ್ದ ಅಂಗರಕ್ಷಕ ಹಾಗೂ ಪ್ರಮುಖ ಸಹವರ್ತಿ ಗುರ್ಮೀತ್ ಸಿಂಗ್ ಅಲಿಯಾಸ್ ಷಿರಾ ಶುಕ್ರವಾರ ಶಿವಸೇನೆ ಸೇರಿದರು.

ಗುರ್ಮೀತ್ ಸಿಂಗ್ ಅವರಿಗೆ ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಮಾರಂಭದಲ್ಲಿ ಪಕ್ಷದ ಯುವ ಘಟಕದ ಅಧ್ಯಕ್ಷ ಆದಿತ್ಯ ಠಾಕ್ರೆ ಕೂಡ ಉಪಸ್ಥಿತರಿದ್ದರು. 

ಚುನಾವಣಾ ಮತದಾನಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಸಲ್ಮಾನ್ ಖಾನ್ ಅವರ ಸಹಚರ ಶಿವಸೇನೆ ಸೇರಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಗುರ್ಮಿತ್ ಸಿಂಗ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಮತ್ತು ಆದಿತ್ಯ ಠಾಕ್ರೆ ಇಬ್ಬರೂ ಭಾಗಿಯಾಗಿರುವುದು ಅನುಮಾನಗಳನ್ನು ಮತ್ತಷ್ಟು ಬಲಗೊಳಿಸಿದೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸೋಮವಾರ (ಅಕ್ಟೋಬರ್ 21) ನಡೆಯಲಿದೆ. ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್