ಸಂಗ್ರಹ ಚಿತ್ರ 
ದೇಶ

ಪಿಒಕೆ ಉಗ್ರನೆಲೆಗಳ ಮೇಲೆ ಸೇನೆ ದಾಳಿ: 4-5 ಪಾಕ್ ಸೈನಿಕರು ಹತ, ಹಲವರಿಗೆ ಗಾಯ!

ಇಬ್ಬರು ಭಾರತೀಯ ಸೈನಿಕರ ಹತ್ಯೆ ಬೆನ್ನಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ್ದು, ದಾಳಿಯಲ್ಲಿ ಕನಿಷ್ಠ 4 ರಿಂದ 5 ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀನಗರ: ಇಬ್ಬರು ಭಾರತೀಯ ಸೈನಿಕರ ಹತ್ಯೆ ಬೆನ್ನಲ್ಲೇ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮೇಲೆ ಭಾರತೀಯ ಸೈನಿಕರು ದಾಳಿ ಮಾಡಿದ್ದು ದಾಳಿಯಲ್ಲಿ ಕನಿಷ್ಛ 4 ರಿಂದ 5 ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಸಂಸ್ಥೆಯೊಂದು ವರದಿ ಮಾಡಿದ್ದು, ತಂಗ್ ಧಾರ್ ಸೆಕ್ಟರ್ ನಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಸೇನೆ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆಗೈದಿತ್ತು. ಈ ಘಟನೆ ಬೆನ್ನಲ್ಲೇ ಭಾರತೀಯ ಸೇನೆ  ಪಾಕ್ ಆರ್ಟಿಲರಿ ಗನ್ ಗಳ ಮೂಲಕ ಉಗ್ರ ಕ್ಯಾಂಪ್ ಗಳ ಮೇಲೆ ತೀವ್ರ ದಾಳಿ ನಡೆಸಿದೆ. ಸೇನೆ ತನ್ನ ಆರ್ಟಿಲರಿ ಗನ್ ಗಳ ಮೂಲಕ ಉಗ್ರ ಕ್ಯಾಂಪ್ ಗಳ ಮೇಲೆ ದಾಳಿ ಮಾಡುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ವೇಳೆ ಉಗ್ರರ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದ ಪಾಕಿಸ್ತಾನ ಸೈನಿಕರನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕನಿಷ್ಠ 4 ರಿಂದ 5 ಮಂದಿ ಪಾಕಿಸ್ತಾನಿ ಸೈನಿಕರು ಹತರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಕಾರ್ಯಾಚರಣೆಯಲ್ಲಿ ಸಾಕಷ್ಟು ಸಾವುನೋವು ಸಂಭವಿಸಿದ್ದು, ಉಗ್ರ ಕ್ಯಾಂಪ್ ಗಳಲ್ಲಿದ್ದವರು ಉಗ್ರರೇ ಎಂಬುದರ ಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT