ಸಂಗ್ರಹ ಚಿತ್ರ 
ದೇಶ

ಗಡಿಯಲ್ಲಿ ಮತ್ತೆ 'ಪಾಪಿ'ಸ್ತಾನದಿಂದ ಕದನ ವಿರಾಮ ಉಲ್ಲಂಘನೆ: ಇಬ್ಬರು ಸೈನಿಕರು ಹುತಾತ್ಮ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ.

ಶ್ರೀನಗರ: ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಸೈನಿಕರು ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಸೇನೆಯ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ.

ಜಮ್ಮು-ಕಾಶ್ಮೀರದ ಕುಪ್ವಾರಾದ ತಂಗ್‌ಧಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಭಾನುವಾರ ಮುಂಜಾನೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಭಾರತೀಯ ಯೋದರು ಹುತಾತ್ಮರಾಗಿದ್ದಾರೆ.

ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಪಾಕ್ ಸೇನೆ, ಭಾರತದ ಗಡಿಯೊಳಗೆ ಭಾರಿ ಗುಂಡಿನ ದಾಳಿ ಆರಂಭಿಸಿದ್ದು ಇಂದು ಮುಂಜಾನೆ 4 ಗಂಟೆಯವರೆಗೂ ಮುಂದುವರಿದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಉದ್ಧಟತನಕ್ಕೆ ಭಾರತೀಯ ಸೇನೆ ಕೂಡ ತಿರುಗೇಟು ನೀಡಿದ್ದು, ಗುಂಡಿನದಾಳಿಯನ್ನು ತೀವ್ರಗೊಳಿಸಿದೆ.

ಇನ್ನು ಅಕ್ಟೋಬರ್ 13 ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣದ ಬಳಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಲ್ಲಿ ಯೋಧನೊಬ್ಬ ಹುತಾತ್ಮನಾಗಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!

ಹಾರ್ಮುಜ್ ಮೂಲಕ ಸಾಗುವ ಹಡಗುಗಳಿಗೆ ಇರಾನ್ ಹೊಸ ಶುಲ್ಕ: ಮಿತ್ರ ರಾಷ್ಟ್ರಗಳಿಗೆ ಮಾತ್ರ ವಿಶೇಷ ಸೌಲಭ್ಯ..!