ಚಿದಂಬರಂ 
ದೇಶ

ಐಎನ್‌ಎಕ್ಸ್‌  ಮೀಡಿಯಾ ಹಗರಣ: ಇಂದು ಚಿದಂಬರಂ ಜಾಮೀನು ತೀರ್ಪು ಪ್ರಕಟ

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯ ತೀರ್ಪುನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಲಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯ ತೀರ್ಪುನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಲಿದೆ.

ಕಳೆದ ಶುಕ್ರವಾರ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಇಂದು ಆದೇಶ ಪ್ರಕಟಿಸಲಿದೆ.

ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರ ಸಿಬಿಐ ಚಿದಂಬರಂ, ಅವರ ಪುತ್ರ ಕಾರ್ತಿ ಹಾಗೂ ಅಧಿಕಾರಿಗಳು ಸೇರಿದಂತೆ 15 ಮಂದಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಹೀಗಾಗಿ ಚಿದಂಬರಂ ಅವರು ಜಾಮೀನು ಪಡೆಯುವ ವಿಶ್ವಾಸದಲ್ಲಿದ್ದಾರೆ.

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.

2007ರ ಅವಧಿಯಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಲ್ಲಿ ಕೆಲವು ಅವ್ಯವಹಾರ ಮೂಲಕ ಐಎನ್‌ಎಕ್ಸ್ ಮೀಡಿಯಾ ಹೌಸ್‌ಗೆ "ನೆರವು' ಮಾಡಿಕೊಟ್ಟ ಆರೋಪ ಎದುರಿಸುತ್ತಿದ್ದು, 305 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಿಬಿಐ ಅಧಿಕಾರಿಗಳು 2007ರಲ್ಲಿ ಪ್ರಕರಣ ದಾಖಲಿಸಿದ್ದರು. 

ಈ ಸಂಬಂಧ ಚಿದಂಬರಂ ಪುತ್ರ ಕಾರ್ತಿ ವಿರುದ್ಧ ಎರಡು ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!