ದೇಶ

ಮಹಾರಾಷ್ಟ್ರ ಚುನಾವಣೆ: 2ನೇ ಬಾರಿಗೆ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಬಿಜೆಪಿ

Nagaraja AB

ಮುಂಬೈ:  288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಇಂದು ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು,  235 ಮಹಿಳೆಯರು ಸೇರಿದಂತೆ ಒಟ್ಟಾರೇ 3237 ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ.  ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. 

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ನಾಗ್ಪುರ ನೈರುತ್ಯ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರೆ ಕಾಂಗ್ರೆಸ್ ಮುಖಂಡ ಅಶೋಕ್ ಚವ್ಹಾಣ್  ನಾದೇಡ್ ಜಿಲ್ಲೆಯ ಬೊಕಾರ್ ಹಾಗೂ ಪೃಥ್ವಿರಾಜ್ ಚೌಹ್ಹಾಣ್  ಸತಾರಾ ಜಿಲ್ಲೆಯ ಕಾರಡ್ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ದೇವೇಂದ್ರ ಫಡ್ನವೀಸ್ ನಾಯಕತ್ವದಲ್ಲಿ ಬಿಜೆಪಿ ಎರಡನೇ ಬಾರಿಗೆ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ , ಮುಂಬೈಯ ವೊರ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.  29 ವರ್ಷದ ಆದಿತ್ಯ ಚುನಾವಣಾ ಕಣ ಪ್ರವೇಶಿಸುವ ಮೂಲಕ ಠಾಕ್ರೆ ಕುಟುಂಬ ಮೊದಲ ಬಾರಿಗೆ ಚುನಾವಣಾ ರಾಜಕೀಯ ಪ್ರವೇಶಿಸಿದೆ. 

ಬಿಜೆಪಿ 164, ಶಿವಸೇನಾ 124 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಕಾಂಗ್ರೆಸ್ 147, ಎನ್ ಸಿಪಿ 121 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬಿಜೆಪಿ ನೇತೃತ್ವದ ಮಹಾಯುತಿ ಹಾಗೂ ಕಾಂಗ್ರೆಸ್ ನೇತೃತ್ವದಲ್ಲಿನ ಮೈತ್ರಿಕೂಟ ಮಹಾ ಅಗಾದಿ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.  

ಈ ಮಧ್ಯೆ ರಾಜ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ನವ ನಿರ್ಮಾಣ ಸೇನೆ 101 ಕ್ಷೇತ್ರಗಳಲ್ಲಿ ತನ್ನ  ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಿಸಿದೆ.  1400 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳು ಗೆಲುವಿಗಾಗಿ ಪ್ರಾರ್ಥಿಸುತ್ತಿದ್ದಾರೆ. 

SCROLL FOR NEXT