ಜಮ್ಮು-ಕಾಶ್ಮೀರ: ಪೊಂಚ್ ಬಳಿ ಪಾಕ್ ಶೆಲ್ಲಿಂಗ್ ದಾಳಿ, ಇಬ್ಬರು ನಾಗರಿಕರಿಗೆ ಗಾಯ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಇಂದು ಭಾರೀ ಶೆಲ್ಲಿಂಗ್ ದಾಳಿ ನಡೆಸಲಾಗಿದ್ದು, ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಜಮ್ಮು: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಇಂದು ಭಾರೀ ಶೆಲ್ಲಿಂಗ್ ದಾಳಿ ನಡೆಸಲಾಗಿದ್ದು, ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಮೆಂದಾರ್ ಸೆಕ್ಟರ್ ನ ಬಾಲಕೋಟ್ ಪ್ರದೇಶದಾದ್ಯಂತ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಮೊರ್ಟಾರ್ ಶೆಲ್ಲಿಂಗ್ ದಾಳಿ ನಡೆಸಲಾಗಿದೆ. ಭಾರತೀಯ ಸೇನೆಯಿಂದ ಪ್ರತ್ಯುತ್ತರ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪಾಕ್ ಶೆಲ್ಲಿಂಗ್ ದಾಳಿಯಿಂದಾಗಿ ಗಾಯಗೊಂಡಿದ್ದ ಇಬ್ಬರು ನಾಗರಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೆಲ್ಲಿಂಗ್ ದಾಳಿಯಾಗುತ್ತಿರುವ ಗ್ರಾಮಸ್ಥರು ಮನೆ ಹಾಗೂ ಬಂಕರ್ಸ್ ಕೆಳಗಡೆ ರಕ್ಷಣೆ ಪಡೆಯುತ್ತಿದ್ದಾರೆ. ಕೆಲ ಶಾಲೆಗಳ ಮಕ್ಕಳನ್ನು ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.