ಸಾಂದರ್ಭಿಕ ಚಿತ್ರ 
ದೇಶ

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ನೌಕರಿ ಇಲ್ಲ: ಅಸ್ಸಾಂ ಸರ್ಕಾರ ಮಹತ್ವದ ನಿರ್ಧಾರ!

2021ರಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ  ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.

ಗುವಾಹತಿ:  2021ರಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ  ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. 

ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಮುಖ್ಯಮಂತ್ರಿ ಸರ್ಬಾನಂದ್ ಸೋನೊವಾಲ್ ಈ ಮಾಹಿತಿಯನ್ನು ಅಧಿಕೃತಗೊಳಿಸಿದ್ದು, 2021 ಜನವರಿಯಿಂದ ಜಾರಿಗೆ ಬರುವಂತೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರನ್ನು ಸರ್ಕಾರಿ ಉದ್ಯೋಗಕ್ಕೆ ಪರಿಗಣಿಸಲಾಗುವುದಿಲ್ಲ, ಜನಸಂಖ್ಯಾ ನಿಯಂತ್ರಣ ಇದರ ಹಿಂದಿರುವ ಪ್ರಮುಖ ಉದ್ದೇಶ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT