ಚಿದಂಬರಂ 
ದೇಶ

ಐಎನ್‌ಎಕ್ಸ್ ಮೀಡಿಯಾ ಹಗರಣ: ಮಾಜಿ ಸಚಿವ ಚಿದಂಬರಂಗೆ ಜಾಮೀನು

ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಕಳೆದ ಶುಕ್ರವಾರ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು ಇಂದು ತೀರ್ಪು ಪ್ರಕಟಿಸಿದೆ. 

ಸದ್ಯ ಚಿದಂಬರಂ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿದ್ದಾರೆ. ಐಎನ್‌ಎಕ್ಸ್‌ ಮೀಡಿಯಾಗೆ ವಿದೇಶಿ ದೇಣಿಗೆ ಪಡೆಯಲು ಅನುಮತಿ ನೀಡಲೆಂದು ಯುಪಿಎ ಆಡಳಿತ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರು ತಮ್ಮ ಪ್ರಭಾವ ಬಳಸಿದ್ದರು. 

ಇದಕ್ಕೆ ಪ್ರತಿಯಾಗಿ ಅವರು ಐಎನ್‌ಎಕ್ಸ್‌ ಮೀಡಿಯಾ ಕಂಪನಿಯಿಂದ ತಮ್ಮ ಪುತ್ರ ಕಾರ್ತಿಗೆ ಸಹಾಯ ಮಾಡಲು ಆಗ್ರಹಿಸಿದ್ದರು. ಜತೆಗೆ ಕಿಕ್‌ಬ್ಯಾಕ್‌ ಕೂಡ ಪಡೆದಿದ್ದರು,' ಎಂಬ ಆರೋಪ ಆಧರಿಸಿ 2017ರ ಮೇ 15ರಂದು ಚಿದಂಬರಂ ಅವರ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿತ್ತು. 

ಈ ಹಿಂದೆ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್