ದೇಶ

ಜಮ್ಮು-ಕಾಶ್ಮೀರದಲ್ಲಿ ಎನ್'ಕೌಂಟರ್: 3 ಜೆಇಎಂ ಉಗ್ರರನ್ನು ಸದೆಬಡಿದ ಸೇನೆ

Manjula VN

ಶ್ರೀನಗರ: ದಕ್ಷಿಣ ಕಾಶ್ಮೀರದ ತ್ರಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಹತ್ಯೆ ಮಾಡಿದೆ. 

ಹತ್ಯೆಯಾಗಿರುವ ಮೂವರು ಉಗ್ರರ ಪೈಕಿ ಇಬ್ಬರು ಉಗ್ರರು ವಿದೇಶಿ ಉಗ್ರರಾಗಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಆಯುಕ್ತ ದಿಲ್ಬಾಗ್ ಸಿಂಗ್ ಅವರು ಹೇಳಿದ್ದಾರೆ. 

ತ್ರಾಲ್'ನಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭಾರತೀಯ ಸೇನೆ ಕಾರ್ಯಾಚರಣೆಗಿಳಿದಿದೆ. ಈ ವೇಳೆ ಉಗ್ರರು ಸೇನೆ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆಯನ್ನು ಎನ್'ಕೌಂಟರ್ ಆಗಿ ಪರಿವರ್ತಿಸಿ ದಿಟ್ಟ ಉತ್ತರ ನೀಡುವ ಮೂಲಕ ಮೂರು ಉಗ್ರರನ್ನು ಹತ್ಯೆ ಮಾಡುವಲ್ಲಿ ಸೇನೆ ಯಶಸ್ವಿಯಾಗಿದೆ. 

ಪ್ರಸ್ತುತ ಹತ್ಯೆಯಾಗಿರುವ ಉಗ್ರರು ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಗುಜ್ಜರ್ ಸಮುದಾಯಕ್ಕೆ ಸೇರಿ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. 

SCROLL FOR NEXT