ಸಾಂದರ್ಭಿಕ ಚಿತ್ರ 
ದೇಶ

ರಾ, ಸೇನಾ ಕಚೇರಿಗಳ ಮೇಲೆ ದಾಳಿಗೆ ಉಗ್ರರ ಸಂಚು: ದೆಹಲಿಯಲ್ಲಿ ಹೈ ಅಲರ್ಟ್ ಘೋಷಣೆ

ಪಾಕಿಸ್ತಾನ ಮೂಲದ ಜಮಾತ್ - ಉದ್- ದಾವಾ ಹಾಗೂ ಲಷ್ಕರ್​-ಇ- ತೊಯ್ಬಾ(ಎಲ್​ಇಟಿ) ಉಗ್ರ ಸಂಘಟನೆಗಳು ದೆಹಲಿಯಲ್ಲಿರುವ ಭಾರತೀಯ ಸೇನೆ ಮತ್ತು ರೀಸರ್ಚ್​ ಅಂಡ್​ ಅನಾಲಿಸಿಸ್​ ವಿಂಗ್​(ರಾ) ಕಚೇರಿಗಳ ಮೇಲೆ ದಾಳಿ ನಡೆಸಲು ಭಾರಿ ಸಂಚು ರೂಪಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ನವದೆಹಲಿ: ಪಾಕಿಸ್ತಾನ ಮೂಲದ ಜಮಾತ್ - ಉದ್- ದಾವಾ ಹಾಗೂ ಲಷ್ಕರ್​-ಇ- ತೊಯ್ಬಾ(ಎಲ್​ಇಟಿ) ಉಗ್ರ ಸಂಘಟನೆಗಳು ದೆಹಲಿಯಲ್ಲಿರುವ ಭಾರತೀಯ ಸೇನೆ ಮತ್ತು ರೀಸರ್ಚ್​ ಅಂಡ್​ ಅನಾಲಿಸಿಸ್​ ವಿಂಗ್​(ರಾ) ಕಚೇರಿಗಳ ಮೇಲೆ ದಾಳಿ ನಡೆಸಲು ಭಾರಿ ಸಂಚು ರೂಪಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಮುಂಬೈ ದಾಳಿಯ ಮಾಸ್ಟರ್​ ಮೈಂಡ್​ ಹಫೀಜ್​ ಸಯೀದ್ ನೇತೃತ್ವದ ಉಗ್ರ ಸಂಘಟನೆಗಳು ಭಾರತದಲ್ಲಿ ಭೀಕರ ದಾಳಿ ನಡೆಸಲು ಸಂಚು ರೂಪಿಸಿವೆ. ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಇತ್ತೀಚಿನ ಗುಪ್ತಚರ ಮಾಹಿತಿಯ ಪ್ರಕಾರ, ಅಕ್ಟೋಬರ್​ ತಿಂಗಳ ಅಂತ್ಯದಲ್ಲಿ ಭಾರತೀಯ ಸೇನಾ ಮತ್ತು ರಾ ಕಚೇರಿಗಳ ಮೇಲೆ ದಾಳಿ ನಡೆಸಲು ಜಮಾತ್ - ಉದ್- ದಾವಾ ಹಾಗೂ ಲಷ್ಕರ್​-ಇ- ತೊಯ್ಬಾ(ಎಲ್​ಇಟಿ) ಉಗ್ರ ಸಂಘಟನೆಗಳು ಸಂಚು ರೂಪಿಸಿವೆ.

ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇದರೊಂದಿಗೆ ಪೊಲೀಸ್​ ಸಿಬ್ಬಂದಿ ವಾಸಿಸುವ ಸ್ಥಳಗಳು ಹಾಗೂ ಪೊಲೀಸ್​ ಮತ್ತು ಅರೆ ಮಿಲಿಟರಿ ಪಡೆಗಳ ಕಚೇರಿಗಳ ಮೇಲೂ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಇದೆ.

ಫೈನಾನ್ಶಿಯಲ್​ ಆ್ಯಕ್ಷನ್​ ಟಾಸ್ಕ್​ ಫೋರ್ಸ್​(ಎಫ್​ಎಟಿಎಫ್​)ನ ಏಷಿಯಾ ಪೆಸಿಪಿಕ್​ ಗ್ರೂಪ್​(ಎಪಿಜಿ)ನಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಭಂಗ ಎದುರಾದ ಬಳಿಕ ಉಗ್ರರು ಈ ಸಂಚು ರೂಪಿಸಿರುವುದಾಗಿ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT