ದೇಶ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಮುನ್ನಡೆ, ಮತ್ತೆ ಅಧಿಕಾರದತ್ತ ಕಮಲ ಪಡೆ

Srinivasamurthy VN

ಮುಂಬೈ: ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ನಿರೀಕ್ಷೆಯಂತೆಯೇ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಭಾರಿ ಮುನ್ನಡೆಯತ್ತ ದಾಪುಗಾರಿಸಿದ್ದು, ಅಧಿಕಾರದತ್ತ ದಾಪುಗಾಲಿರಿಸಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿಯ ನಂತರ ನಡೆದ ಮೊದಲ ವಿಧಾನಸಭೆ ಚುನಾವಣೆ ಇದಾಗಿದ್ದು, ಬಿಜೆಪಿ ಪಾಲಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅಲ್ಲದೆ ಕಾಶ್ನೀರ ವಿಚಾರವಾಗಿ ತಾನು ಕೈಗೊಂಡ ನಿರ್ಣಯಕ್ಕೆ ಜನರ ಮನ್ನಣೆ ಇದೆ ಎಂದು ಹೇಳಿಕೊಳ್ಳಲು ಬಿಜೆಪಿಗೆ ಈ ಚುನಾವಣೆ ಅತ್ಯಂತ ಪ್ರಮುಖವಾಗಿದೆ. 

ಮಹಾರಾಷ್ಟ್ರದಲ್ಲಿ 180 ಕ್ಷೇತ್ರಗಳಲ್ಲಿ ಬಿಜೆಪಿ–ಶಿವಸೇನೆ ಮೈತ್ರಿಕೂಟ ಮುನ್ನಡೆ
ಇತ್ತ ಮಹಾರಾಷ್ಟ್ರದಲ್ಲಿ ನಿರೀಕ್ಷೆಯಂತೆಯೇ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಅಧಿಕಾರ ರಚನೆಯತ್ತ ದಾಪುಗಾಲಿರಿಸಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟದ ಅಭ್ಯರ್ಥಿಗಳು ಒಟ್ಟು 180 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮುನ್ನಡೆಗಳು ಗೆಲುವಾದರೆ ಬಿಜೆಪಿ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಚ್ಚಳವಾಗಿದೆ. ಉಳಿದಂತೆ  87 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಮೈತ್ರಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. 2014ರಲ್ಲಿ ಪಕ್ಷವು 83 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

SCROLL FOR NEXT