ಸಂಗ್ರಹ ಚಿತ್ರ 
ದೇಶ

ಮಹಾರಾಷ್ಟ್ರ: ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು?

ಸರ್ಕಾರ ರಚನೆಯಾದರೂ ಕಳೆಗುಂದಿದ ಬಿಜೆಪಿ, ಕಮಲಪಡೆ ಕಳೆದುಕೊಂಡ ಸ್ಥಾನವೆಷ್ಟು?ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ-ಶಿವಸೇನೆ ಮೈತ್ರಿಕೂಟ ಸರ್ಕಾರ ರಚನೆಯತ್ತ ದಾಪುಗಾಲಿರಿಸಿದೆಯಾದರೂ ಹಾಲಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಹಿನ್ನೆಡೆಯಾಗಿರುವುದಂತೂ ಸತ್ಯ

ಎನ್ ಸಿಪಿ ಮುಂದೆ ಮಂಕಾದ ಕಾಂಗ್ರೆಸ್, ಶಿವಸೇನೆ ಗಳಿಸಿದ್ದೆಷ್ಟು ಗೊತ್ತಾ!

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಬಿಜೆಪಿ-ಶಿವಸೇನೆ ಮೈತ್ರಿಕೂಟ ಸರ್ಕಾರ ರಚನೆಯತ್ತ ದಾಪುಗಾಲಿರಿಸಿದೆಯಾದರೂ ಹಾಲಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿಗೆ ಹಿನ್ನೆಡೆಯಾಗಿರುವುದಂತೂ ಸತ್ಯ.

ಹೌದು.. ಚುನಾವಣೋತ್ತರ ಸಮೀಕ್ಷೆಗಳ ವರದಿಯಂತೆಯೇ ಬಿಜೆಪಿ ಮೈತ್ರಿಕೂಟ ಸರ್ಕಾರ ರಚನೆಯತ್ತ ದಾಪುಗಾಲಿರಿಸಿದೆ. ಆದರೆ 2014ರ ಚುನಾವಣೆಗೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿ ಗಳಿಸಿದ್ದಕ್ಕಿಂತ ಕಳೆದುಕೊಂಡಿದ್ದೇ ಹೆಚ್ಚು.. 288 ಕ್ಷೇತ್ರಗಳ ಪೈಕಿ ಈ ವರೆಗಿನ ಫಲಿತಾಂಶದ ಅನ್ವಯ 164 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 98 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 2014ರ ಚುನಾವಣೆಯಲ್ಲಿ ಬಿಜೆಪಿ 122 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿತ್ತು. ಆದರೆ ಈಗ ಬಿಜೆಪಿಗೆ 24 ಕ್ಷೇತ್ರಗಳ ನಷ್ಟವಾಗಿದೆ.

ಇನ್ನು 126 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಶಿವಸೇನೆ 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 2014ರಲ್ಲಿಯೂ ಶಿವಸೇನೆ ಇಷ್ಟೇ ಕ್ಷೇತ್ರಗಳಲ್ಲಿ ಜಯ ಸಾಧಿಸಿತ್ತು.

ಎನ್ ಸಿಪಿಗೆ ಬಲ ತಂದ ಚುನಾವಣೆ
ಇನ್ನು ಈ ಬಾರಿ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಆರ್ಭಟದ ಚುನಾವಣಾ ಪ್ರಚಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಎನ್ ಸಿಪಿ ಗಮನಾರ್ಹ ಸಾಧನೆ ತೋರಿದೆ. 121 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಎನ್ ಸಿಪಿ 55 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ  ಬಾರಿ ಹೆಚ್ಚುವರಿ 14 ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. 2014ರಲ್ಲಿ ಕೇವಲ 41 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತ್ತು.  

ಕಾಂಗ್ರೆಸ್ ಗೂ ಹಿನ್ನಡೆ
ಇನ್ನು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ಹಿನ್ನಡೆಯಾಗಿದ್ದು, 147 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 39 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 2014ರಲ್ಲಿ 42 ಸ್ಥಾನಗಳಿಸಿದ್ದ ಕಾಂಗ್ರೆಸ್ ಈ ಬಾರಿ 3 ಕ್ಷೇತ್ರಗಳನ್ನು ಕಳೆದುಕೊಂಡು ಕೇವಲ 39 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT