ಶರದ್ ಪವಾರ್ 
ದೇಶ

ರಾಜಕೀಯ ಮುಗಿಯಿತು ಎಂದವರಿಗೆ ಫಲಿತಾಂಶ ತಕ್ಕ ಪಾಠ ಕಲಿಸಿದೆ: ಶರದ್ ಪವಾರ್

ಗುರುವಾರ ಹೊರಬಿದ್ದ ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ  62 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮುಂಬೈ: ಗುರುವಾರ ಹೊರಬಿದ್ದ ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶ ಹಲವು ಅಚ್ಚರಿಗೆ ಕಾರಣವಾಗಿದೆ. ಶರದ್ ಪವಾರ್ ನೇತೃತ್ವದ ಎನ್ ಸಿಪಿ  62 ಸ್ಥಾನಗಳನ್ನು ಗೆದ್ದುಕೊಂಡಿದೆ.

220 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿದ್ದ ಬಿಜೆಪಿ ಶಿವಸೇನೆ ಮೈತ್ರಿ 162 ಸ್ಥಾನಗಳನ್ನಷ್ಟೇ ಪಡೆಯಲು ಶಕ್ತವಾಗಿದೆ. ಅಚ್ಚರಿ ಎಂಬಂತೆ ಶರದ್ ಪವಾರ್ ಮತ್ತೆ ಪುಟಿದೆದ್ದಿದ್ದಾರೆ, ಇದರ ಪರಿಣಾಮ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಹೆಚ್ಚಾಗಿವೆ.

ಫಲಿತಾಂಶದ ನಂತರ ಮಾತನಾಡಿದ ಶರದ್ ಪವಾರ್, ನನ್ನ ರಾಜಕೀಯ ಜೀವನ ಮುಗಿಯಿತು ಎಂದು ಕೊಂಡವರಿಗೆ ಈ ಚುನಾವಣಾ ಫಲಿತಾಂಶ ಸರಿಯಾದ ಪಾಠ ಕಲಿಸಿದೆ ಜೊತೆಗೆ ಉತ್ತರ ನೀಡಿದೆ ಎಂದೂ ಹೇಳಿದ್ದಾರೆ.

ಕೆಲವರು ಮಿತಿ ಮೀರಿ ನಡೆದುಕೊಂಡರು. ಅಧಿಕಾರ ದುರ್ಬಳಕೆ ಮಾಡಿಕೊಂಡರು. ಅಲ್ಲದೆ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸಿದವರಿಗೆ ರಾಜ್ಯದ ಜನರೇ ಸರಿಯಾದ ಉತ್ತರ ನೀಡಿದ್ದಾರೆ. ಈ ಚುನಾವಣೆಯೊಂದಿಗೆ ನನ್ನ ರಾಜಕೀಯ ಜೀವನ ಅಂತ್ಯವಾಯಿತು ಎಂದವರಿಗೆ ಜನರೇ ಬುದ್ದಿ ಕಲಿಸಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಜನರು ಬಿಜೆಪಿ- ಶಿವಸೇನೆಯ 220 ಸೀಟ್ ಗೆಲ್ಲುವ ಕನಸಿಗೆ ತಣ್ಣೀರು ಎರಚಿದ್ದಾರೆ. ಅಧಿಕಾರದ ದುರಹಂಕಾರ ಜನರಿಗೆ ಇಷ್ಟವಾಗಿಲ್ಲ ಎಂದು ಕೇಸರಿ ಮೈತ್ರಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ  ಪ್ರಕಟವಾದ ಫಲಿತಾಂಶದಲ್ಲಿ ಬಿಜೆಪಿ- ಶಿವಸೇನೆ ಮೈತ್ರಿ 162 ಸ್ಥಾನ ಗೆದ್ದು ಬಹುಮತ ಪಡೆದಿದ್ದರೆ, ಕಾಂಗ್ರೆಸ್ -ಎನ್ ಸಿಪಿ ಮೈತ್ರಿ 104 ಸ್ಥಾನ ಗೆದ್ದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT