ಚಿದಂಬರಂ 
ದೇಶ

ಚಿದಂಬರಂಗೆ ಅನಾರೋಗ್ಯ, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು

ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ಚಿದಂಬರಂ ಅವರನ್ನು ಇಂದು ಬೆಳಗ್ಗೆ ತಿಹಾರ್ ಜೈಲಿನಿಂದ ಆರ್ ಎಂಎಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಇಂದ ಸಂಜೆ 5.40ಕ್ಕೆ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಚಿದಂಬರಂ ಆಪ್ತ ಮೂಲಗಳ ಪ್ರಕಾರ, ಕಾಂಗ್ರೆಸ್ ನಾಯಕನ ಆರೋಗ್ಯದಲ್ಲಿ ದಿಢೀರ್​​ ಏರುಪೇರಾಗಿದ್ದು, ಅವರ ಆರೋಗ್ಯ ಸಹಜ ಸ್ಥಿತಿಯಲ್ಲಿಲ್ಲ. ಆದರೆ ಚಿದಂಬರಂಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಇಡಿ ಮೂಲಗಳು ತಿಳಿಸಿವೆ.

ಕಳೆದ ಆಗಸ್ಟ್ ತಿಂಗಳಲ್ಲಿ ಸಿಬಿಐ ಅಧಿಕಾರಿಗಳು ಐಎನ್ ಎಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಚಿದಂಬರಂ ಅವರನ್ನು ಬಂಧಿಸಿದ್ದರು. ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ನಂತರ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇಡಿ) ಅವರನ್ನು ವಶಕ್ಕೆ ಪಡೆದಿದ್ದು, ಮುಂದಿನ ಬುಧವಾರದವರೆಗೆ ಇಡಿ ವಶದಲ್ಲಿರಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?