ದೇಶ

ಉಗ್ರ ಸಂಘಟನೆಗಳಿಗೆ ನೆರವು ನೀಡುವವರ ವಿರುದ್ಧ ಕಠಿಣ ಕ್ರಮ ಅತ್ಯಗತ್ಯ: ಪಾಕ್ ತಿವಿದ ಪ್ರಧಾನಿ ಮೋದಿ

Srinivasamurthy VN

ನವದೆಹಲಿ: ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಯೂರೋಪಿಯನ್ ನಿಯೋಗಕ್ಕೆ ಹೇಳಿದ್ದಾರೆ. 

ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುತ್ತಿದ್ದ ವಿಧಿ 370 ಅನ್ನು ರದ್ಧು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ಹಿಂಸಾಚಾರ ಉಂಟಾಗಿದೆ ಎಂಬ ಸುದ್ದಿಗಳ ಹರಿದಾಡುತ್ತಿರುವಂತೆಯೇ ಇತ್ತ ಯೂರೋಪಿನ ಜನಪ್ರತಿನಿಧಿಗಳ ನಿಯೋಗವೊಂದು ಕಾಶ್ಮೀರಕ್ಕೆ ಭೇಟಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯ ಅಧ್ಯಯನ ನಡೆಸಲು ಬಂದಿರುವ ಯೂರೋಪ್​ ಒಕ್ಕೂಟದ 27 ಮಂದಿ ಸಂಸದರ ತಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರನ್ನು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಯೂರೋಪ್ ಒಕ್ಕೂಟದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 'ಭಯೋತ್ಪಾದನೆಯನ್ನು ಬೆಂಬಲಿಸುವವರು ಮತ್ತು ಅದರ ಪ್ರಾಯೋಜಕರ ವಿರುದ್ಧ ತುರ್ತಾಗಿ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಭಯೋತ್ಪಾದನೆಯ ವಿರುದ್ಧ ಯಾವುದೇ ಮೃದು ಧೋರಣೆ ಅನುಸರಿಸಬಾರದು ಎಂದು ಹೇಳಿದರು.

ಆ ಮೂಲಕ ಪಾಕಿಸ್ತಾನದ ಹೆಸರು ಹೇಳಿದೇ ಪ್ರಧಾನಿ ಮೋದಿ ಪರೋಕ್ಷವಾಗಿ ಪಾಕಿಸ್ತಾನವನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದರು.

SCROLL FOR NEXT