ಸಾಂದರ್ಭಿಕ ಚಿತ್ರ 
ದೇಶ

ಶಾಕಿಂಗ್ ಸುದ್ದಿ: 2050ರ ವೇಳೆಗೆ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಮಾಯ!

ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ಇದರ ಪರಿಣಾಮ ಸಾಗರದ ನೀರಿನ ಮಟ್ಟ ಏರಿಕೆಯಾಗಿ ದೇಶದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಅನೇಕ ಕರಾವಳಿ ನಗರಗಳು ಸಂಪೂರ್ಣ ಮುಳುಗಡೆಯಾಗಿ...

ನವದೆಹಲಿ: ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ಇದರ ಪರಿಣಾಮ ಸಾಗರದ ನೀರಿನ ಮಟ್ಟ ಏರಿಕೆಯಾಗಿ ದೇಶದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಅನೇಕ ಕರಾವಳಿ ನಗರಗಳು ಸಂಪೂರ್ಣ ಮುಳುಗಡೆಯಾಗಿ ಕೋಟ್ಯಾಂತರ ರ ಜನರು ಮನೆ-ಮಠ ಕಳೆದುಕೊಂಡು ಬೀದಿ ಪಾಲಾಗಲಿದ್ದಾರೆ.

ಗಂಭೀರದ ವಿಚಾರವೆಂದರೆ ಸಾಗರಗಳು ತನ್ನ ದಡದ ಪ್ರದೇಶಗಳನ್ನ ನುಂಗಿಹಾಕುವ ಪ್ರಕ್ರಿಯೆ ನಿರೀಕ್ಷೆಗೂ ಮೀರಿ ಅತಿ ವೇಗದಲ್ಲಿ ನಡೆಯುತ್ತಿದೆ. ಸಾಗರದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ನಿರೀಕ್ಷೆ ಮೀರಿದ ವೇಗದಲ್ಲಿ ಭೂಪ್ರದೇಶಗಳು ನೀರಿನಿಂದ ಅವೃತವಾಗಲಿವೆ ಎಂದೂ ಸಂಶೋಧನೆಯೊಂದು ತಿಳಿಸಿದೆ.

ಇನ್ನು 30 ವರ್ಷದಲ್ಲಿ, ಅಂದರೆ 2050 ರವೇಳೆಗೆ ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ನೀರಿನಲ್ಲಿ ಮುಳುಗಡೆಯಾಗಿ ವಿಶ್ವದ ಭೂಪಟದಿಂದ ಕಣ್ಮರೆಯಾಗಲಿವೆ.

ಇನ್ನೂ ಆತಂಕದ ವಿಚಾರವೆಂದರೆ 15 ಕೋಟಿಗೂ ಹೆಚ್ಚು ಜನರು ಮನೆ-ಮಠ ಕಳೆದುಕೊಂಡು ಸಂತ್ರಸ್ತರಾಗಿ, ಬೇರೆ ಕಡೆ ವಲಸೆ ಹೋಗುವುದರಿಂದ ವಿವಿಧ ಸಾಮಾಜಿಕ ಮತ್ತು ರಾಷ್ಟ್ರೀಯ ಸಮಸ್ಯೆಗಳು ತಲೆದೋರಬಹುದು. ವಿವಿಧ ದೇಶಗಳಲ್ಲಿ ಕಲಹ, ಭಯೋತ್ಪಾದನೆಗಳು ಹೆಚ್ಚಾಗಬಹುದು ಎಂದೂ ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

ಅಮೆರಿಕದ ನ್ಯೂ ಜೆರ್ಸಿ ನಗರದ 'ಕ್ಲೈಮೇಟ್ ಸೆಂಟ್ರಲ್' ಎಂಬ ವಿಜ್ಞಾನ ಸಂಸ್ಥೆ ನಡೆಸಿದ ಹೊಸ ಸಂಶೋಧನೆಯಿಂದ ಈ ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ ಎಂದೂ ಹೇಳಲಾಗಿದೆ.

ಭಾರತದ ವಾಣಿಜ್ಯ ರಾಜಧಾನಿ ಎನ್ನಲಾದ ಹಾಗೂ ವಿಶ್ವದ ಬೃಹತ್ ನಗರಗಳಲ್ಲೊಂದೆನಿಸಿದ ಮುಂಬೈನ ಬಹುತೇಕ ಭೂಪ್ರದೇಶವು ನೀರಿನಲ್ಲಿ ಮುಳುಗಡೆಯಾಗಲಿದೆ ಎಂದು ಈ ಸಂಶೋಧಕರು ಎಚ್ಚರಿಸಿದ್ದಾರೆ.

“ಕ್ಲೈಮೇಟ್ ಸೆಂಟ್ರಲ್” ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್” ಪತ್ರಿಕೆಯಲ್ಲಿ ಬಿಡುಗಡೆ ಮಾಡಿದ್ದು, ಸಂಶೋಧಕರು ಈ ಹಿಂದಿನ ವಿಧಾನದ ಬದಲು ಉಪಗ್ರಹ ಮಾಹಿತಿ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದ ನೆರವಿನಿಂದ ಸಮುದ್ರ ನೀರಿನ ಮಟ್ಟವನ್ನು ಅಳೆದು ಭೂಮುಳುಗಡೆಯ ಪ್ರಮಾಣವನ್ನು ಹೆಚ್ಚು ಕರಾರುವಾಕ್ಕಾಗಿ ಅಂದಾಜು ಮಾಡಿದ್ದಾರೆ ಎನ್ನಲಾಗಿದೆ.

ಮುಂಬೈ ಮಾತ್ರವಲ್ಲ, ವಿಯೆಟ್ನಾಮ್​ನ ಹೋ ಚಿ ಮಿನ್ ನಗರ, ಥಾಯ್ಲೆಂಡ್​ನ ಬ್ಯಾಂಕಾಕ್, ಚೀನಾದ ಶಾಂಘೈ, ಈಜಿಪ್ಟ್​ನ ಅಲೆಕ್ಸಾಂಡ್ರಿಯಾ, ಇರಾಕ್​ನ ಬಾಸ್ರಾ ಮೊದಲಾದ ನಗರಗಳು ಮುಳುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ