ಕೇವಾಡಿಯಾದಲ್ಲಿ ನಡೆಯುತ್ತಿರುವ ಕಾರ್ಯಕ್ರಮ 
ದೇಶ

ಭಾರತದ ಉಕ್ಕಿನ ಮನುಷ್ಯನ ಜನ್ಮದಿನ: ರಾಷ್ಟ್ರಪತಿ, ಪ್ರಧಾನಿಯಿಂದ ಗೌರವ ನಮನ, ದೇಶಾದ್ಯಂತ ಏಕತಾ  ದಿನಾಚರಣೆ

ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನದ ಅಂಗವಾಗಿ ದೇಶಾದ್ಯಂತ ಏಕತಾ ದಿನ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹಸಚಿವ ಅಮಿತ್ ಶಾ ರಾಷ್ಟ್ರ ರಾಜಧಾನಿಯ ಪಟೇಲ್ ಚೌಕ್ ನಲ್ಲಿ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ನವದೆಹಲಿ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅರ 144ನೇ ಜನ್ಮದಿನದ ಅಂಗವಾಗಿ ದೇಶಾದ್ಯಂತ ಏಕತಾ ದಿನ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕೇಂದ್ರ ಗೃಹಸಚಿವ ಅಮಿತ್ ಶಾ ರಾಷ್ಟ್ರ ರಾಜಧಾನಿಯ ಪಟೇಲ್ ಚೌಕ್ ನಲ್ಲಿ ವಲ್ಲಭಭಾಯಿ ಪಟೇಲರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಪ್ರಧಾನಿ ಗುಜರಾತ್ ನ ನರ್ಮದಾ ಜಿಲ್ಲೆಯಲ್ಲಿರುವ ಕೇವಾಡಿಯಾದ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಅಲ್ಲಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 


ಹರಿದು ಹಂಚಿಹೋಗಿದ್ದ ಪ್ರಾಂತಗಳನ್ನು ಸ್ವಾತಂತ್ರ್ಯಾನಂತರ ಒಗ್ಗೂಡಿಸಿದ ಕೀರ್ತಿಗೆ ಪಾತ್ರರಾಗಿರುವ ಪಟೇಲ್ ಅವರಿಗೆ ಗೌರವ ಸಮರ್ಪಣೆಯ ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಹರದೀಪ್ ಪುರಿ, ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಮುಂತಾದವರು ಭಾಗಿಯಾಗಿದ್ದರು.


ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆಯನ್ನು 2014ರಿಂದ ಎನ್ ಡಿಎ ಸರ್ಕಾರ ’ರಾಷ್ಟ್ರೀಯ ಏಕ್ತಾದಿವಸ್’ ಅಥವಾ ರಾಷ್ಟ್ರೀಯ ಏಕತಾ ದಿನವೆಂದು ಆಚರಿಸಿಕೊಂಡು ಬಂದಿದೆ. ರಾಷ್ಟ್ರದ ಬಲವನ್ನು ಏಕತೆ ಮತ್ತು ಸಮಗ್ರತೆಯಿಂದ ಪುನರ್ ದೃಢೀಕರಿಸಲು ಈ ಸಂದರ್ಭದಲ್ಲಿ ಏಕತೆಗಾಗಿ ಓಟವನ್ನು ಸಹ ಆಯೋಜಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT