ಸರಿತಾ ನಾಯರ್ 
ದೇಶ

ಕೇರಳ ಸೋಲಾರ್ ಹಗರಣ: ಸರಿತಾ ನಾಯರ್, ಪತಿ ಬಿಜುಗೆ 3 ವರ್ಷ ಜೈಲು ಶಿಕ್ಷೆ

ಕೇರಳದ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸರಿತಾ ನಾಯರ್ ಹಾಗೂ ಆಕೆಯ ಪತಿ ಬಿಜು ರಾಧಾಕೃಷ್ಣನ್ ಗೆ ಕೊಯಮತ್ತೂರು ಕೋರ್ಟ್ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.

ಕೊಯಮತ್ತೂರು: ಕೇರಳದ ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸರಿತಾ ನಾಯರ್ ಹಾಗೂ ಆಕೆಯ ಪತಿ ಬಿಜು ರಾಧಾಕೃಷ್ಣನ್ ಗೆ ಕೊಯಮತ್ತೂರು ಕೋರ್ಟ್ ಮೂರು ವರ್ಷಗಳ ಶಿಕ್ಷೆ ವಿಧಿಸಿದೆ.

ಸರಿತಾ ನಾಯರ್ ಹಾಗೂ ಆಕೆಯ ಪತಿ ಬಿಜು ರಾಧಾಕೃಷ್ಣನ್ ಮತ್ತು ವ್ಯವಸ್ಥಾಪಕ ರವಿಗೆ ತಪ್ಪಿತಸ್ಥ ಎಂದು ಕೋರ್ಟ್ ತೀರ್ಪು ನೀಡಿದ್ದು, ಅಪರಾಧಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 10 ಸಾವಿರ ರು ರುಪಾಯಿ ದಂಡ ವಿಧಿಸಿದೆ. 

ಜಿಲ್ಲಾ ಕ್ರೈಂ ಬ್ರಾಂಚ್ ಪ್ರಕಾರ. ಸರಿತಾ ನಾಯರ್ ಹಾಗೂ ಆಕೆಯ ಆಪ್ತರ ವಿರುದ್ಧ ಕೊಯಮತ್ತೂರು ಮತ್ತು ನಿಲಗಿರಿಯಲ್ಲಿ ಎರಡು ಪ್ರತ್ಯೇಕ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಲ್ಲಿ ಪವನ ವಿದ್ಯುತ್ ಉತ್ಪಾದನಾ ಘಟಕದ ಹೆಸರಿನಲ್ಲಿ 33 ಲಕ್ಷ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದರು.

ಸೋಲಾರ್ ಹಗರಣಕ್ಕೆ ಸಂಬಂಧಿಸಿದಂತೆ 8 ತಿಂಗಳು ಜೈಲು ವಾಸ ಅನುಭವಿಸಿದ್ದ ಸರಿತಾ ನಾಯರ್ 2014 ರ ಫೆಬ್ರವರಿಯಲ್ಲಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಕಣ್ಣೂರಿನಲ್ಲಿ ಸೋಲಾರ್ ಫಲಕ ಅಳವಡಿಕೆ ಘಟಕ ಸ್ಥಾಪಿಸಲು ತನ್ನನ್ನು ಕರೆದು ಕಾಂಗ್ರೆಸ್ ಶಾಸಕ ಎ.ಪಿ ಅದುಲ್ ಕುಟ್ಟಿ ತಿರುವನಂತಪುರದ ಸರ್ಕಾರಿ ಹೋಟೆಲ್ ನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು 2014 ರಲ್ಲಿ ಸರಿತಾ ನಾಯರ್ ದೂರು ದಾಖಲಿಸಿದ್ದರು. 

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ವಿರುದ್ಧವಬೂ ಸರಿತಾ ನಾಯರ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT