ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ:ಭಾರತೀಯ ಯೋಧ ಹುತಾತ್ಮ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಪೊಂಚ್ : ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಪೊಂಚ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಮೋರ್ಟರ್ ಶೆಲ್ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯೂ ಪ್ರತಿದಾಳಿ ನಡೆಸಿದ್ದು, ಪಾಕಿಸ್ತಾನಕ್ಕೆ ಪ್ರತ್ಯುತ್ತರ ನೀಡಿದೆ ಎಂದು ಅವರು ಹೇಳಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಆಗ್ಗಿಂದ್ದಾಗೆ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸುತ್ತಲೇ ಇದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.