ದೇಶ

ಲಾಲೂಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಕಿಡ್ನಿ ಸೋಂಕು, ಆಸ್ಪತ್ರೆಗೆ ದಾಖಲು

Srinivasamurthy VN

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಿಡ್ನಿ ಸೋಂಕಿನಿಂದ ಬಳಲುತ್ತಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೇವು ಹಗರಣ ಸಂಬಂಧ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಲಾಲು ಪ್ರಸಾದ್ ಅವರು ಗಂಭೀರ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ವೈದ್ಯರು ಲಾಲು ಪ್ರಸಾದ್ ಅವರ ಮೂತ್ರಕೋಶಗಳು(ಕಿಡ್ನಿ) ಕೆಲಸ ಮಾಡುತ್ತಿಲ್ಲ, ಶುಗರ್ ಹಾಗೂ ರಕ್ತದ ಒತ್ತಡ ಏರುಪೇರಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಸ್ತುತ ಲಾಲು ಪ್ರಸಾದ್ ಯಾದವ್ ಅವರನ್ನು ರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ದಾಖಲಿಸಲಾಗಿದ್ದು ನುರಿತ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಡಾ. ಉಮೇಶ್ ಪ್ರಸಾದ್ ಅವರು, ಲಾಲು ಪ್ರಸಾದ್ ಅವರ ಕಿಡ್ನಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಜೊತೆಗೆ ಶುಗರ್ ಕೂಡ ಹೆಚ್ಚಾಗಿದೆ, ರಕ್ತದ ಒತ್ತಡ ಕೂಡ ಏರು ಪೇರಾಗುತ್ತಿದೆ ಹೀಗಾಗಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಗೆ ಹೋಲಿಸಿದರೆ ಅವರ ತೂಕವೂ ಕಡಿಮೆಯಾಗಿದೆ. ಈಗ ಅವರಿಗೆ ಔಷಧವನ್ನು ನೀಡಲಾಗುತ್ತಿದೆ ಎಂದು  ಮಾಹಿತಿ ನೀಡಿದ್ದಾರೆ. 

ಲಾಲೂಪ್ರಸಾದ್ ಯಾದವ್(71 ವರ್ಷ) ಮೇವು ಹಗರಣದಲ್ಲಿ ಆರೋಪಿಯಾಗಿ 2017ರಿಂದ ಜೈಲಿನಲ್ಲಿದ್ದಾರೆ. 

SCROLL FOR NEXT