ಮುಂಬೈ ಒಎನ್'ಜಿಸಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ 
ದೇಶ

ಮುಂಬೈ ಒಎನ್'ಜಿಸಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ: 2 ಅಗ್ನಿಶಾಮಕ ಸಿಬ್ಬಂದಿ ಸೇರಿ ಐವರ ಸಾವು

ವಾಣಿಜ್ಯ ನಗರಿ ಮುಂಬೈನ ಒಎನ್'ಜಿಸಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಒಟ್ಟು ಐವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಮುಂಬೈ: ವಾಣಿಜ್ಯ ನಗರಿ ಮುಂಬೈನ ಒಎನ್'ಜಿಸಿ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗಳು ಸೇರಿ ಒಟ್ಟು ಐವರು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಸಂಸ್ಕರಣಾ ಘಟಕದ ಮಳೆ ನೀರು ಕಾಲುವೆಯಲ್ಲಿ ಬೆಂಕಿ ಅವಘಟ ಸಂಭವಿಸಿದ್ದು, ಅವಘಡಕ್ಕೆ ಪ್ರಮುಖ ಕಾರಣ ತಿಳಿದುಬಂದಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ವಾಹನ ಹಾಗೂ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. 

ಅಗ್ನಿ ಅವಘಡದಲ್ಲಿ ಕೆಲ ಕಾರ್ಮಿಕರಿಗೂ ಕೂಡ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಅಗ್ನಿ ಅವಘಡವನ್ನು ಖಚಿತಪಡಿಸಿರುವ ಒಎನ್'ಜಿಸಿ ಅಧಿಕಾರಿಗಳು, ಸಂಸ್ಕರಣಾ ಘಟಕದಲ್ಲಿ ಇಂದು ಬೆಳಿಗ್ಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಈಗಾಗಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿ ಕೊಂಡಿದೆ. ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ತೈಲ ಸಂಸ್ಕರಣೆ ಕಾರ್ಯ ಅಬಾಧಿತವಾಗಿ ಮುಂದುವರೆದಿದೆ. ಅನಿಲ ಸಾಗಣೆಯ ಮಾರ್ಗವನ್ನು ಹಜೀರಾ ಘಟಕದತ್ತೆ ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಪದೇ ಪದೇ ದಾಳಿ: ಭಾರತ ಹೇಳಿದ್ದೇನು?

ದ್ವೇಷ ಭಾಷಣ ಬಿಟ್ಟು 19 ವಿಧೇಯಕಗಳಿಗೆ ರಾಜ್ಯಪಾಲರ ಅಂಕಿತ; ಎರಡು ಮಸೂದೆ ವಾಪಸ್

ಕಾವೇರಿ ನದಿ ಸಂರಕ್ಷಣೆಗೆ ಹಣ ಮೀಸಲಿಡಿ: ಕೇಂದ್ರ ಸಚಿವರಿಗೆ ಸಂಸದ ಯದುವೀರ್ ಒಡೆಯರ್ ಪತ್ರ!

SCROLL FOR NEXT