ಸಂಗ್ರಹ ಚಿತ್ರ 
ದೇಶ

ಚಂದ್ರಯಾನ-2: ಮೊದಲ ಹಂತದ ಮೂನ್ ಲ್ಯಾಂಡರ್ ಡಿ-ಆರ್ಬಿಟ್ ಮ್ಯಾನೋವರ್ ಯಶಸ್ವಿ

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2ನ ಮತ್ತೊಂದು ಹಂತ ಕೂಡ ಯಶಸ್ವಿಯಾಗಿದ್ದು, ಮೊದಲ ಹಂತದ ಮೂನ್ ಲ್ಯಾಂಡರ್ ಡಿ-ಆರ್ಬಿಟ್ ಮೆನೋವರ್ ಪ್ರಕ್ರಿಯೆಯನ್ನು ವಿಜ್ಞಾನಿಗಳು ಮಂಗಳವಾರ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಚಂದ್ರನ ಮೇಲ್ಮೈನತ್ತ ಮೂನ್ ಲ್ಯಾಂಡರ್ ಅನ್ನು ತಳ್ಳುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿಜ್ಞಾನಿಗಳು

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2ನ ಮತ್ತೊಂದು ಹಂತ ಕೂಡ ಯಶಸ್ವಿಯಾಗಿದ್ದು, ಮೊದಲ ಹಂತದ ಮೂನ್ ಲ್ಯಾಂಡರ್ ಡಿ-ಆರ್ಬಿಟ್ ಮೆನೋವರ್ ಪ್ರಕ್ರಿಯೆಯನ್ನು ವಿಜ್ಞಾನಿಗಳು ಮಂಗಳವಾರ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ನಿನ್ನೆಯಷ್ಟೇ ಚಂದ್ರಯಾನ 2 ಆರ್ಬಿಟರ್ ನಿಂದ ವಿಕ್ರಮ್ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಬೇರ್ಪಡಿಸಿದ್ದ ವಿಜ್ಞಾನಿಗಳು, ಇದೀಗ ಚಂದ್ರನ ಮೇಲ್ಮನತ್ತ ಮೂನ್ ಲ್ಯಾಂಡರ್ ಅನ್ನು ತಳ್ಳುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಈ ಕುರಿತಂತೆ ಇಸ್ರೋ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಂದು ಬೆಳಗ್ಗೆ 8.50ರ ಸುಮಾರಿನಲ್ಲಿ ವಿಜ್ಞಾನಿಗಳು ಚಂದ್ರನ ಮೇಲ್ಮನತ್ತ ಮೂನ್ ಲ್ಯಾಂಡರ್ ಅನ್ನು ತಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಮೂನ್ ಲ್ಯಾಂಡರ್ ನ ಎಂಜಿನ್ ಅನ್ನು ಸುಮಾರು 4 ಸೆಕೆಂಡ್ ಗಳ ಕಾಲ ಚಾಲನೆ ಮಾಡಲಾಯಿತು.

ಅದರಂತೆ ಮೂನ್ ಲ್ಯಾಂಡರ್ ಚಂದ್ರನ ಮೇಲ್ಮೈನ 109 x 120 ಕಿ.ಮೀ ವ್ಯಾಪ್ತಿಯೊಳಗೆ ತಳ್ಳಲ್ಪಟ್ಟಿದೆ. ಇದು ಮೊದಲ ಹಂತದ ಪ್ರಕ್ರಿಯೆಯಾಗಿದ್ದು, ನಾಳೆ ನಡೆಯಲಿರುವ 2ನೇ ಹಂತದ ಕಾರ್ಯಾಚರಣೆಯಲ್ಲಿ ಮತ್ತೆ ಮೂನ್ ಲ್ಯಾಂಡರ್ ಎಂಜಿನ್ ಅನ್ನು ಚಾಲನೆ ಮಾಡುವ ಮೂಲಕ  39  X 110ಕಿ,ಮೀ ವ್ಯಾಪ್ತಿಯೊಳಗೆ ತಳ್ಳಲಾಗುತ್ತದೆ. ಇದು ತೀರಾ ಸೂಕ್ಷ್ಮ ಕಾರ್ಯಾಚರಣೆಯಾಗಿದ್ದು, ಚಂದ್ರನ ದಕ್ಷಿಣ ತುದಿಯಲ್ಲಿ ಮೂನ್ ಲ್ಯಾಂಡರ್ ಮತ್ತು ರೋವರ್ ಅನ್ನು ಇಳಿಸುವ ಕಾರ್ಯಾಚರಣೆಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT