ಉಪವಾಸ ಕೈ ಬಿಟ್ಟ ಮೇಧಾ ಪಾಟ್ಕರ್ 
ದೇಶ

ನೆರೆಪೀಡಿತರಿಗೆ ಪುನರ್ವಸತಿ ಆಗ್ರಹಿಸಿ ಸತ್ಯಾಗ್ರಹ: 9 ದಿನಗಳ ಬಳಿಕ ಉಪವಾಸ ಕೈ ಬಿಟ್ಟ ಮೇಧಾ ಪಾಟ್ಕರ್

ಸರ್ದಾರ್ ಸರೋವರ್ ಅಣೆಕಟ್ಟು ಯೋಜನೆಯಿಂದ ನಿರ್ವಸಿತರಾದವರಿಗೆ ಪುನರ್ವಸತಿಗಾಗಿ ಕಳೆದ 9 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಕೊನೆಗೂ ಕೈ ಬಿಟ್ಟಿದ್ದಾರೆ.

ಅಹ್ಮದಾಬಾದ್: ಸರ್ದಾರ್ ಸರೋವರ್ ಅಣೆಕಟ್ಟು ಯೋಜನೆಯಿಂದ ನಿರ್ವಸಿತರಾದವರಿಗೆ ಪುನರ್ವಸತಿಗಾಗಿ ಕಳೆದ 9 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಕೊನೆಗೂ ಕೈ ಬಿಟ್ಟಿದ್ದಾರೆ.

ಮಧ್ಯಪ್ರದೇಶದ ಬಾರ್ವಾನಿ ಜಿಲ್ಲೆಯ ನೆರೆ ಸಂತ್ರಸ್ತರಿಗೆ ಸೂಕ್ತ ಪುನರ್ವಸತಿ ಒದಗಿಸಬೇಕು ಹಾಗೂ ಗುಜರಾತ್​ನಲ್ಲಿರುವ ಸರ್ದಾರ್​ ಸರೋವರ್​ ಜಲಾಶಯದ ಗೇಟ್​​ಗಳನ್ನು ತೆರೆಯಬೇಕು ಎಂದು ಒತ್ತಾಯಿಸಿ  ನರ್ಮದಾ ಬಚಾವೋ ಚಳವಳಿಯ ನಾಯಕಿ ಮೇಧಾ ಪಾಟ್ಕರ್​​ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದರು. ಆದರೆ ನಿನ್ನೆ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅದರ ಹೊರತಾಗಿಯೂ ಮೇಧಾ ತಮ್ಮ ಸತ್ಯಾಗ್ರಹ ಮುಂದುವರೆಸಿದ್ದರು.

ಇದೀಗ ಸತ್ಯಾಗ್ರಹ ನಿರತ ಮೇಧಾ ಅವರನ್ನು ಮಧ್ಯ ಪ್ರದೇಶ ಸಿಎಂ ಕಮಲ್ ನಾಥ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ತಮ್ಮ 9 ದಿನಗಳ ಉಪವಾಸ ಸತ್ಯಾಗ್ರಹವನ್ನು ಮೇಧಾ ಪಾಟ್ಕರ್ ಮತ್ತು ಅವರ ತಂಡ ಕೈಬಿಟ್ಟಿದೆ. ಮಧ್ಯ ಪ್ರದೇಶ ಸರ್ಕಾರದ ಮುಖ್ಯಕಾರ್ಯದರ್ಶಿ ಎಸ್ ಸಿ ಬೆಹರ್ ಅವರು ಮೇಧಾ ಅವರಿಗೆ ನಿಂಬೆ ಹಣ್ಣಿನ ರಸವನ್ನು ಕುಡಿಯಲು ನೀಡುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಮನವಿ ಮಾಡಿದರು.

ಇನ್ನು ಈ ಹಿಂದೆ ಮೇಧಾ ಪಾಟ್ಕರ್ ಆರಂಭಿಸಿದ್ದ ಉಪವಾಸ ಸತ್ಯಾಗ್ರಹಕ್ಕೆ ಇನ್ನೂ ಐದು ಜನ ಮಹಿಳೆಯರು ಕೂಡ ಭಾಗವಹಿಸಿದ್ದರು. 

ಈ ತಿಂಗಳ ಪ್ರಾರಂಭದಲ್ಲಿ ಅಧಿಕ ಮಳೆಯಿಂದ ಜಲಾಶಯದ ಹಿನ್ನೀರಿನ ಮಟ್ಟ ಜಾಸ್ತಿಯಾಗಿತ್ತು. ಹೀಗಾಗಿ ಬಾರ್ವಾನಿ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ರಾಜ್​ಘಟ್​ ಮತ್ತು ಛೋಟ ಬಡ್ದಾ ಗ್ರಾಮಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತ್ತು. ಬಳಿಕ ಆ ಎರಡು ಗ್ರಾಮಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿತ್ತು. ಆದರೆ ಸರ್ಕಾರದ ಪ್ರವಾಹ ಪರಿಹಾರ ಕಾರ್ಯಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮೇಧಾ ಅವರು, ಪುನರ್ವಸತಿ ಕಲ್ಪಿಸುವುದು ಎಂದರೆ ನೆರೆ ಸಂತ್ರಸ್ತರಿಗೆ ಕೇವಲ 5 ಲಕ್ಷ ಪರಿಹಾರ ಘೋಷಿಸುವುದಲ್ಲ. ಬದಲಾಗಿ ಅವರಿಗೆ ಜೀವನೋಪಾಯ ವ್ಯವಸ್ಥೆಯನ್ನು ಒದಗಿಸಬೇಕು. ಛೋಟ ಬಡ್ದಾ ಗ್ರಾಮದ ಕನಿಷ್ಠ 1 ಸಾವಿರಕ್ಕೂ ಹೆಚ್ಚು ನಿರಾಶ್ರಿತರು ಸರ್ಕಾರ ಪುನರ್ವಸತಿ ಕಲ್ಪಿಸಿ ಕೊಡುತ್ತದೆ ಎಂದು ಕಾಯುತ್ತಿದ್ದಾರೆ. ನಮ್ಮ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದೆ ಇಟ್ಟಿದ್ದೇವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿರಾಶ್ರಿತ ಕೇಂದ್ರಗಳನ್ನು ತೆರೆಯಬೇಕಿತ್ತು. ನೆರೆಪೀಡಿತರಿಗೆ ಈವರೆಗೆ ಯಾವುದೇ ಪುನರ್ವಸತಿ ವ್ಯವಸ್ಥೆ ಕಲ್ಪಿಸಿಲ್ಲ, ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT