ಸೋನಿಯಾ ಗಾಂಧಿ 
ದೇಶ

ಕಾಂಗ್ರೆಸ ಪಕ್ಷಕ್ಕೆ ಹೊಸ ಚೈತನ್ಯ: ಮೇಜರ್ ಸರ್ಜರಿಗೆ ಸೋನಿಯಾ ಸಜ್ಜು

ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮೇಜರ್  ಸರ್ಜರಿಗೆ     ಪಕ್ಷದ ಮುಖ್ಯಸ್ಥೆ  ಸೋನಿಯಾ ಗಾಂಧಿ ಮುಂದಾಗಿದ್ದು, ಅದರಂತೆ ಅನೇಕ ರಾಜ್ಯಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.  

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಹೊಸ ಚೈತನ್ಯ ನೀಡಲು ಮೇಜರ್  ಸರ್ಜರಿಗೆ     ಪಕ್ಷದ ಮುಖ್ಯಸ್ಥೆ  ಸೋನಿಯಾ ಗಾಂಧಿ ಮುಂದಾಗಿದ್ದು, ಅದರಂತೆ ಅನೇಕ ರಾಜ್ಯಗಳಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.  

ಶತಮಾನದಷ್ಟು ಹಳೆಯದಾದ ಪಕ್ಷಕ್ಕೆ ಸಾಂಸ್ಥಿಕ, ಹೊಸ ರೂಪ ಕೊಡಲು ದೆಹಲಿ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಲು ಸೋನಿಯಾ ಸಜ್ಜಾಗಿದ್ದಾರೆ ಎನ್ನಲಾಗಿದೆ. 

ಶೀಲಾ ದೀಕ್ಷಿತ್ ಅವರ ನಿಧನದ ನಂತರ ದೆಹಲಿಯಲ್ಲಿ ಅಧ್ಯಕ್ಷರ ಹುದ್ದೆ ಖಾಲಿ ಇದ್ದು, ಕಮಲ್ ನಾಥ್ ಅವರು ಮಧ್ಯಪ್ರದೇಶದಲ್ಲೂ ಮುಖ್ಯಮಂತ್ರಿಯಾದ ನಂತರವೂ ಅಧ್ಯಕ್ಷರ ಹುದ್ದೆಯಲ್ಲಿ  ಮುಂದುವರಿದಿದ್ದಾರೆ. 

ಅದೇ ರೀತಿ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಅವರು ಈ ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ. ಅವರ ಬದಲಿಗೆ ಹೊಸ ಅಧ್ಯಕ್ಷರನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗಿದೆ. 

ರಾಜೀನಾಮೆ ಹಿಂಪಡೆಯಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮಾಡಿದ ಮನವಿಯನ್ನು ರಾಹುಲ್ ಗಾಂಧಿ ತಿರಸ್ಕರಿಸಿದ ನಂತರ ಆಗಸ್ಟ್ 10 ರಂದು ಪಕ್ಷದ ಹಂಗಾಮಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅಧಿಕಾರ ವಹಿಸಿಕೊಂಡಿದ್ದಾರೆ. 

ರಾಜಸ್ಥಾನದಲ್ಲಿ ಸಚಿನ್ ಪೈಲಟ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಎರಡು ಹುದ್ದೆ ಹುದ್ದೆ ಅಲಂಕರಿಸಿದ್ದಾರೆ.  ಅನೇಕ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯಗಳ ಉಸ್ತುವಾರಿಗಳೂ ಸಹ ಬದಲಾಗುವ ಸಾಧ್ಯತೆಯಿದೆ ಎಂದೂ ಹೇಳಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!