ಸಂಗ್ರಹ ಚಿತ್ರ 
ದೇಶ

ಪೆಟ್ರೋಲ್, ಡೀಸೆಲ್ ವಾಹನಗಳ ನಿಷೇಧ?; ಹೀಗ್ ಹೇಳಿದ್ರು ಕೇಂದ್ರ ಸಚಿವ ನಿತಿನ್ ಗಡ್ಕರಿ..!

ಮಾಲಿನ್ಯ ರಹಿತ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿಷೇಧ ಹೇರಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಅಗತ್ಯ ಕ್ರಮ

ನವದೆಹಲಿ: ಮಾಲಿನ್ಯ ರಹಿತ ವಿದ್ಯುತ್ ಚಾಲಿತ ವಾಹನಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿಷೇಧ ಹೇರಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಬೆಳಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಿತಿನ್ ಗಡ್ಕರಿ ಅವರು, ಕೇಂದ್ರ ಸರ್ಕಾರ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುತ್ತಿರುವುದು ನಿಜ. ಆದರೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧಿಸುವ ಯಾವುದೇ ರೀತಿಯ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಆದರೆ ಈ ಕುರಿತ ಚರ್ಚೆಗಳು ಮತ್ತು ಸಲಹೆಗಳು ಕೇಳಿ ಬರುತ್ತಿವೆ. ಆದರೆ ಒಂದು ವಿಚಾರವನ್ನು ಸ್ಪಷ್ಟಪಡಿಸುತ್ತೇನೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದರು.

ಇದೇ ವೇಳೆ ಆಟೋಮೊಬೈಲ್ ಕ್ಷೇತ್ರದ ಕುರಿತು ಮಾತನಾಡಿದ ನಿತಿನ್ ಗಡ್ಕರಿ, ದೇಶದಲ್ಲಿ ಆಟೋ ಮೊಬೈಲ್ ಕ್ಷೇತ್ರದ ಬೆಳವಣಿಗೆ ಕುಸಿದಿರಬಹುದು. ಆದರೆ ಬಹುದೊಡ್ಡ ಪ್ರಮಾಣದ ಉದ್ಯೋಗ ಅವಕಾಶಗಳನ್ನು ಕಲ್ಪಿಸಿದೆ. ಮಾಲಿನ್ಯಕ್ಕೆ ಕೇವಲ ವಾಹನಗಳೇ ಕಾರಣವಲ್ಲ. ಮಾಲಿನ್ಯ ನಿಯಂತ್ರಣ ಸರ್ಕಾರದ ಮತ್ತು ದೇಶದ ಕಾಳಜಿಯಾಗಿದೆ. ದೇಶದ ಅಭಿವೃದ್ದಿಯನ್ನು ದೃಷ್ಠಿಯಲ್ಲಿಟ್ಟುಕೊಂಡು, ಆರ್ಥಿಕತೆಗೆ ಧಕ್ಕೆ ಬಾರದ ರೀತಿಯಲ್ಲಿ ಅದನ್ನು ಹೇಗೆ ಸಾಧಿಸಬಹುದು ಎಂಬುದರ ಕುರಿತು ಗಂಭೀರ ಚರ್ಚೆಯಾಗುತ್ತಿದೆ. ಈ ಕುರಿತಂತೆ ಸರ್ಕಾರ ಕೂಡ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್‌ನಲ್ಲಿ ಸಿಲುಕಿರುವ ಭಾರತೀಯರಿಗೆ ಪ್ರಧಾನಿ ಮೋದಿ ಸಹಾಯದ ಭರವಸೆ; ಕೊಚ್ಚಿಯಲ್ಲಿ 'ವಿಕ್ಷಿತ್ ಕೇರಳಂ'ಗೆ ಚಾಲನೆ

'ರಕ್ಷಿತ್ ಶೆಟ್ಟಿ - ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

ಹಾರ್ಮುಜ್ ಜಲಸಂಧಿ ಬಳಿ ದಾಳಿ: ಭಾರತ ಕಡೆಗೆ ಹೊರಟ್ಟಿದ್ದ ಥಾಯ್ ಕಾರ್ಗೋ ಹಡಗಿನಲ್ಲಿ ಬೆಂಕಿ, ಕಪ್ಪು ಹೊಗೆ! ಹೊಣೆ ಹೊತ್ತ ಇರಾನ್

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್‌ ದಾಳಿ; ಭಾರತೀಯ ಸೇರಿ ನಾಲ್ವರಿಗೆ ಗಾಯ

'ಲೋಕಸಭೆಯಲ್ಲಿ ನಾನು ಮಾತನಾಡದಂತೆ ಹಲವು ಬಾರಿ ತಡೆದರು': ರಾಹುಲ್ ಗಾಂಧಿ

SCROLL FOR NEXT