ಪಿ. ಚಿದಂಬರಂ 
ದೇಶ

ಜೈಲಿನಲ್ಲಿ ವಿದೇಶಿ ಶೌಚಾಲಯ, ಔಷಧ ಮತ್ತಿತರ ಸೌಕರ್ಯ ಬಯಸಿದ ಚಿದಂಬರಂ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ  14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ  ಔಷಧಗಳು, ವಿದೇಶಿ ಶೌಚಾಲಯ  ಮತ್ತಿತರ ಸವಲತ್ತುಗಳನ್ನು ಒದಗಿಸಲು  ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿದೆ.

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ  14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ  ಔಷಧಗಳು, ವಿದೇಶಿ ಶೌಚಾಲಯ  ಮತ್ತಿತರ ಸವಲತ್ತುಗಳನ್ನು ಒದಗಿಸಲು  ನ್ಯಾಯಾಲಯದ ಬಳಿ ಮನವಿ ಮಾಡಿಕೊಳ್ಳಲಾಗಿದೆ.

ಸೆಪ್ಟೆಂಬರ್ 19ರವರೆಗೂ ನ್ಯಾಯಾಂಗ ಬಂಧನದ ಆದೇಶವನ್ನು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಪ್ರಕಟಿಸಿದ ಬಳಿಕ ಚಿದಂಬರಂ ಅವರಿಗೆ ಕನ್ನಡಕ, ಸೂಕ್ತ ಔಷಧಗಳನ್ನು ತೆಗೆದುಕೊಂಡು ಹೋಗಲು ಹಾಗೂ ವಿದೇಶಿ ಶೌಚಾಲಯ ಒದಗಿಸಲು ಅನುಮತಿ ಬಯಸಿ ಚಿದಂಬರಂ ಪರ ವಕೀಲರು ಪ್ರತ್ಯೇಕ ಅರ್ಜಿ ಸಲ್ಲಿಸಿದರು.

ಸೂಕ್ತ ಭದ್ರತೆ ಇರುವ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಿಕೊಡುವಂತೆಯೂ ಕೇಳಿಕೊಳ್ಳಲಾಗಿದೆ. ಅರ್ಜಿಗಳಲ್ಲಿ ಮಾಡಿದ ಮನವಿಗಳಿಗೆ  ಅನುಮತಿಸಲಾಗಿದೆ "ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ತಿಹಾರಿ ಜೈಲಿನಲ್ಲಿ ಚಿದಂಬರಂ ಅವರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಸಾಲಿಸಿಟರಿ ಜನರಲ್ ತುಷಾರ್ ಮೆಹ್ತಾ ವಿಚಾರಣೆ ಸಂದರ್ಭದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT