ಪಿ.ಚಿದಂಬರಂ 
ದೇಶ

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಚಿದಂಬರಂ, ಕಾರ್ತಿ ವಿಚಾರಣೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

 ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಒಳಗೊಂಡ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ದೆಹಲಿ ನ್ಯಾಯಾಲಯ  ಆದೇಶಿಸಿದೆ. ಇಡಿ ಹಾಗೂ ಸಿಬಿಐ ಪ್ರಕರಣ ಮುಂದೂಡುವಂತೆ ಪದೇ ಪದೇ ಮನವಿ ಮಾಡಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಒಳಗೊಂಡ ಏರ್‌ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಚಿದಂಬರಂ ಹಾಗೂ ಅವರ ಪುತ್ರನ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ದೆಹಲಿ ನ್ಯಾಯಾಲಯ  ಆದೇಶಿಸಿದೆ. ಇಡಿ ಹಾಗೂ ಸಿಬಿಐ ಪ್ರಕರಣ ಮುಂದೂಡುವಂತೆ ಪದೇ ಪದೇ ಮನವಿ ಮಾಡಿರುವುದು ಇದಕ್ಕೆ ಕಾರಣವೆನ್ನಲಾಗಿದೆ.

ವಿಶೇಷ ನ್ಯಾಯಾಧೀಶ ಒ ಪಿ ಸೈನಿ ಹೆಚ್ಚಿನ ವಿಚಾರಣೆಗೆ ಯಾವುದೇ ದಿನಾಂಕವನ್ನು ನಿಗದಿಗೊಳಿಸದೆ ಮುಂದೂಡಿದ್ದಾರೆ.ತನಿಖೆ ಯಾವಾಗ ಪೂರ್ಣವಾಗುವುದೋ ಆಗ ವಿಚಾರಣೆಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದ್ದಾರೆ.

ಸಿಬಿಐ ದಾಖಲಿಸಿದ ಪ್ರಕರಣದಲ್ಲಿ ಹಾಗೂ ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಲ್ಲಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯವು ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಇದಕ್ಕೆ ಮುನ್ನ ಸಿಬಿಐ ಮತ್ತು ಇಡಿ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಟರ್ಸ್ ರೊಗಾಟರಿಗೆ ಪ್ರತಿಕ್ರಿಯೆ ಪಡೆಯುವುದಕ್ಕಾಗಿ ವಿಚಾರಣೆ ಮುಂದೂಡಬೇಕೆಂದು ಮನವಿ ಮಾಡಿದ್ದಾರೆ. ಈ ವಿಷಯವನ್ನು ಅಕ್ಟೋಬರ್‌ಮೊದಲ ವಾರಕ್ಕೆ ಮುಂದೂಡಬೇಕೆಂದು ಏಜೆನ್ಸಿಗಳು ನ್ಯಾಯಾಲಯವನ್ನು ಕೋರಿದ್ದವು.

"ದಿನಾಂಕಗಳ ನಂತರ ದಿನಾಂಕವನ್ನು ಕೋರಿ ಪ್ರಾಸಿಕ್ಯೂಷನ್.ಪ್ರಕರಣದ ವಿಚಾರಣೆಗೆ ಸಮಯ ಕೇಳೂತ್ತಿದೆ. ಹಾಗಾಗಿ ಪ್ರಕರಣದ ವಿಚಾರಣೆ ಮುಗಿದ ನಂತರ ನ್ಯಾಯಾಲಯವನ್ನು ಸಂಪರ್ಕಿಸಿ"ಎಂದು ನ್ಯಾಯಾಲಯ ಹೇಳಿದೆ.

2006 ರಲ್ಲಿ ಪಿ. ಚಿದಂಬರಂಕೇಂದ್ರ ಹಣಕಾಸು ಸಚಿವರಾಗಿದ್ದಾಗ ಏರ್ಸೆಲ್-ಮ್ಯಾಕ್ಸಿಸ್ ಒಪ್ಪಂದಕ್ಕೆ ಅವರ ಪುತ್ರ ಕಾರ್ತಿ ಚಿದಂಬರಂ ಅವರು ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯಿಂದ ಹೇಗೆ ಅನುಮತಿ ಪಡೆದರು ಎಂದು ಸಿಬಿಐ ಮತ್ತು ಇಡಿ ಪರಿಶೀಲಿಸುತ್ತಿವೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಯುಪಿಎ ಡಳಿತದ ಅವಧಿಯಲ್ಲಿ ಹಣಕಾಸು ಸಚಿವರಾಗಿ, ಕೆಲವು ವ್ಯಕ್ತಿಗಳಿಗೆ ಪ್ರಯೋಜನವಾಗುವ ಅವಕಾಶದಡಿ ಚಿದಂಬರಂ ಕಾನೂನಿಗೆ ವಿರುದ್ಧವಾಗಿ  ಒಪ್ಪಂದಕ್ಕೆ ಅನುಮೋದನೆ ನೀಡಿದ್ದಾಗಿ ಹೇಳಿದ್ದು ಇದಕ್ಕಾಗಿ ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ಆರೋಪವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT