ನ್ಯಾಯಮೂರ್ತಿ ವಿಜಯ ಕಮಲೇಶ್ ತಹಿಲ್ ರಮಣಿ 
ದೇಶ

ವರ್ಗಾವಣೆ ವಿವಾದ: ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ತಮ್ಮನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾವಣೆಗೊಳಿಸಿದ ಆದೇಶವನ್ನು ಮರುಪರಿಶೀಲಿಸುವ  ಮನವಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ತಿರಸ್ಕರಿಸಿದ ಬೆನ್ನಲ್ಲೇ,  ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ ಕಮಲೇಶ್ ತಹಿಲ್ ರಮಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ಚೆನ್ನೈ: ತಮ್ಮನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾವಣೆಗೊಳಿಸಿದ ಆದೇಶವನ್ನು ಮರುಪರಿಶೀಲಿಸುವ  ಮನವಿಯನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ತಿರಸ್ಕರಿಸಿದ ಬೆನ್ನಲ್ಲೇ,  ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಜಯ ಕಮಲೇಶ್ ತಹಿಲ್ ರಮಣಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. 

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು, ಶುಕ್ರವಾರ ರಾತ್ರಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರಿಗೂ ಅದನ್ನು ರವಾನಿಸಿದ್ದಾರೆ. 2018ರ ಆಗಸ್ಟ್ 8ರಂದು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದಿದ್ದ ತಹಿಲ್ ರಮಣಿ ಅವರನ್ನು ಮೇಘಾಲಯ ಹೈಕೋರ್ಟ್ ಗೆ ವರ್ಗಾವಣೆಗೊಳಿಸುವ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗೊಗೊಯಿ ನೇತೃತ್ವದ ಕೊಲಿಜಿಯಂ ಆಗಸ್ಟ್ 28ರಂದು ಶಿಫಾರಸು ಮುಂದಿಟ್ಟಿತ್ತು. ನಂತರ, ರಮಣಿ ಅವರು ಈ ಶಿಫಾರಸನ್ನು  ಮರುಪರಿಶೀಲಿಸುವಂತೆ ಮನವಿ ಸಲ್ಲಿಸಿದ್ದರು. 

ಆದರೆ, ಇದನ್ನು ಕೊಲಿಜಿಯಂ ಪರಿಗಣಿಸಿರಲಿಲ್ಲ. ತಮ್ಮನ್ನು ಸಣ್ಣ ಹೈಕೋರ್ಟ್ ಗೆ ವರ್ಗಾವಣೆ ಮಾಡಿದ್ದರಿಂದ ಬೇಸರಗೊಂಡಿರುವ ರಮಣಿ ಅವರು, ಇತ್ತೀಚೆಗೆ ಕಾಯಂ ನ್ಯಾಯಮೂರ್ತಿಯಾಗಿ  ನೇಮಕಗೊಂಡವರ ಅಭಿನಂದನಾ ಸಮಾರಂಭದಲ್ಲಿ ಈ ವಿಷಯ ಪ್ರಕಟಿಸಿದರು.  ರಮಣಿ ಅವರು ಹೈಕೋರ್ಟ್ ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ