ದೆಹಲಿ ಮೆಟ್ರೋ ರೈಲಿಗೆ ಸಿಲುಕಿ 26ರ ಮಹಿಳೆ ಆತ್ಮಹತ್ಯೆ: ಪತ್ರ ವಶಕ್ಕೆ 
ದೇಶ

ದೆಹಲಿ ಮೆಟ್ರೋ ರೈಲಿಗೆ ಸಿಲುಕಿ 26ರ ಮಹಿಳೆ ಆತ್ಮಹತ್ಯೆ: ಪತ್ರ ವಶಕ್ಕೆ

ದೆಹಲಿ ಮೆಟ್ರೋಗೆ ಸಿಲುಕಿ 26 ರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ನವದೆಹಲಿ: ದೆಹಲಿ ಮೆಟ್ರೋಗೆ ಸಿಲುಕಿ 26 ರ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಮಾಡಲ್ ಟೌನ್ ಸ್ಟೇಷನ್ ನಲ್ಲಿ ಮೆಟ್ರೋ ರೈಲಿಗೆ ಎದುರಾಗಿ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸರು ಆತ್ಮಹತ್ಯೆಗೆ ಸಂಬಂಧಿಸಿದ ಮಹಿಳೆ ಬರೆದಿದ್ದ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. 

ಸೆ.08 ರಂದು ಸಂಜೆ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ದೆಹಲಿಯ ಪಹರ್ ಗಂಜ್ ನಿವಾಸಿ ಮೀನಾಕ್ಷಿ ಗರ್ಗ್ ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೀನಾಕ್ಷಿ ಗರ್ಗ್ ಆತ್ಮಹತ್ಯೆಗೂ ಮುನ್ನ ಪತ್ರ ಬರೆದಿದ್ದು, ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳಿಕೊಂಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. ಮೃತರ ಕುಟುಂಬ ಸದಸ್ಯರು ಪೊಲೀಸರಿಗೆ ಹೇಳಿಕೆ ನೀಡಿದ್ದು, ಮೀನಾಕ್ಷಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ನೀಡಿದ್ದಾರೆ. 

ಮೀನಾಕ್ಷಿ ಒಂದು ವಾರದಲ್ಲಿ ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಇದು ಮೂರನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video